ಬೆಂಗಳೂರು: ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಎಲ್ಲಾ ವರ್ಗಗಳ ನೆರವಿಗೆ ನಿಂತಿದೆ ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಕೊರೋನಾ ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟ ಸೃಷ್ಟಿಯಾಗಿದೆ. ದುಡಿಯುವ ಕೈಗಳು ಕೈಕಟ್ಟಿ ಕೂರುವಂತಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಅವರು ಎರಡನೇ ಪ್ಯಾಕೇಜ್ ಘೋಷಿಸಿದ್ದು, ಸಂಕಷ್ಟದ ಅವಧಿಯಲ್ಲಿ ಮತ್ತಷ್ಟು ಜನಸಾಮಾನ್ಯರನ್ನು ತಲುಪುವ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.
ಕಳೆದೊಂದು ವರ್ಷದಿಂದ ಕೊರೋನಾ ಸೋಂಕಿಗೆ ರಾಜ್ಯದ ಆರ್ಥಿಕ ವಲಯ ತತ್ತರಿಸಿದೆ. ಕೆಲ ದಿನಗಳ ಹಿಂದಷ್ಟೇ 1250 ಕೋಟಿ ರೂ. ಗಳ ಪ್ಯಾಕೇಜ್ ಘೋಷಿಸಿತ್ತು. ಇದೀಗ ಎರಡನೇ ಬಾರಿಗೆ 500 ಕೋಟಿ ರೂ. ಗಳ ಎರಡನೇ ಪ್ಯಾಕೇಜ್ ಘೋಷಣೆ ಮಾಡಿದೆ. ಈ ಪ್ಯಾಕೇಜ್ ಅನುಕೂಲ ಪಡೆಯುವ ಫಲಾನುಭವಿಗಳ ಫರವಾಗಿ ಸಿಎಂ ಯಡಿಯೂರಪ್ಪ ಅವರಿಗೆ ಚೌಹಾಣ್ ಧನ್ಯವಾದ ಅರ್ಪಿಸಿದ್ದಾರೆ.
ಹೈನುಗಾರಿಕೆಗೂ ಲಾಕ್ಡೌನ್ ದೊಡ್ಡ ಹೊಡೆತ ನೀಡಿತ್ತು. ಆದರೆ ಸರ್ಕಾರದ ಪ್ಯಾಕೇಜ್ನಲ್ಲಿ ರೈತರು ಒದಗಿಸುತ್ತಿರುವ ಹಾಲನ್ನು ಕೆ ಎಂ ಎಫ್ ಹಾಲಿನ ಪುಡಿಯಾಗಿಸಿ ಮಕ್ಕಳಿಗೆ ಆಹಾರ ಧಾನ್ಯಗಳ ಜೊತೆಗೆ ನೀಡುತ್ತಿದೆ. ಇದು ಹೈನುಗಾರಿಕೆ, ಕೆಎಂಎಫ್ ಗೆ ಸಹಕಾರಿಯಾಗಿದೆ. ಜೊತೆಗೆ ಮಕ್ಕಳಲ್ಲಿ ಪೌಷ್ಟಿಕಾಂಶ ಹೆಚ್ಚಿಸಲು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.