ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಮಾಡಿ ಸಚಿವ ಸುರೇಶ್ ಕುಮಾರ್ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈಗಾಗಲೇ ಕೇಂದ್ರ ಮಟ್ಟದ ಸಿಬಿಎಸ್ಇ, ಐಸಿಎಸ್ಐ ಹತ್ತನೇ ಮತ್ತು ಹನ್ನೆರಡನೇ ತರಗತಿಗಳ ಪರೀಕ್ಷೆ ರದ್ದು ಮಾಡಿದೆ. ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗಳ ಬಗೆಗೂ ಗೊಂದಲಗಳು ಸೃಷ್ಟಿಯಾಗಿದ್ದು, ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಬಾರಿಯ ವಿಭಿನ್ನ ಪರಿಸ್ಥಿತಿ ಗಣನೆಗೆ ತೆಗೆದುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ,ಪ್ರಥಮ ಪಿಯುಸಿ ಫಲಿತಾಂಶದ ಆಧಾರದಲ್ಲಿ ಗ್ರೇಡಿಂಗ್ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಸಿಎಂ ಯಡಿಯೂರಪ್ಪ, ಶಿಕ್ಷಣ ತಜ್ಞರು, ಪೋಷಕರ ಅಭಿಪ್ರಾಯ ಸಂಗ್ರಹಿಸಿ ಬಳಿಕ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದ್ದು, ವಿಜ್ಞಾನ, ಗಣಿತ, ಸಮಾಜ ವಿಜ್ಞಾನಕ್ಕೆ ಬಹು ಆಯ್ಕೆಯ ಒಂದು ಪರೀಕ್ಷೆ, ಪ್ರಥಮ ಭಾಷೆ, ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆಗೆ ಒಂದು ಪರೀಕ್ಷೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.