ಬೆಂಗಳೂರು: ಕೊರೋನಾ ನಿರ್ವಹಣೆ, ಆಕ್ಸಿಜನ್, ಲಸಿಕೆ ಮೊದಲಾದ ಅಗತ್ಯ ವಿಚಾರಗಳ ಪೂರೈಕೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ನಿರ್ವಹಣೆ ಮತ್ತು ಇತರ ಅಭಿವೃದ್ಧಿ ವಿಚಾರಗಳ ಬಗ್ಗೆ ಬೆಳಗಾವಿಯ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಸರ್ಕಾರ ಹೆಚ್ಚಿನ ಅನುದಾನ ಒದಗಿಸಲಿದೆ. ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಒದಗಿಸಲಾಗುತ್ತದೆ. ಈ ಸಂಬಂಧ ಆರೋಗ್ಯ ಇಲಾಖೆಯ ಸಚಿವರ ಜೊತೆಗೂ ಚರ್ಚಿಸಿ ಅಗತ್ಯ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.
ಕೊರೋನಾ ನಿರ್ವಹಣೆ ಸಂಬಂಧಿಸಿದಂತೆ ಸಮಸ್ಯೆಗಳ ಪರಿಹಾರಕ್ಕೆ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳುವುದು ಪರಿಣಾಮಕಾರಿ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಬಿಡುಗಡೆಯಾದ ಹಣ ಬಳಕೆ ಮಾಡಿಕೊಂಡು ಸರ್ಟಿಫಿಕೇಟ್ ನೀಡಿದಲ್ಲಿ 24 ಗಂಟೆಗಳ ನಂತರ ಕಂತು ಬಿಡುಗಡೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.