ನವದೆಹಲಿ: ಭಾರತ ಸರ್ಕಾರ ಪುರಸ್ಕರಿಸುವ ಪದ್ಮ ಪ್ರಶಸ್ತಿಗಳಿಗೆ ಸೂಕ್ತವಾದ ವ್ಯಕ್ತಿಗಳನ್ನು ಆಯ್ಕೆ ಮಾಡಿ ನಾಮನಿರ್ದೇಶನ ಮಾಡುವಂತೆ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಹೇಳಿದೆ.
ಇದಕ್ಕಾಗಿ ವಿಶೇಷ ಸಮಿತಿಗಳನ್ನು ರಚನೆ ಮಾಡುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ತಿಳಿಸಿದ್ದು, ವಿವಿಧ ರೀತಿಯಲ್ಲಿ ಸಮಾಜಕ್ಕೆ ಅಗತ್ಯ ಸೇವೆ ಸಲ್ಲಿಕೆ ಮಾಡುತ್ತಿರುವ ಸಾಧಕರನ್ನು ಗುರುತಿಸಲು ತಿಳಿಸಿದೆ.
ಈ ಪುರಸ್ಕಾರಗಳಿಗೆ ಕೇಂದ್ರ ಸರ್ಕಾರ ಈ ಹಿಂದೆ ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರಗಳನ್ನು ಸ್ವೀಕಾರ ಮಾಡಿದ್ದರೂ, ಇವುಗಳಲ್ಲಿ ಸಮಾಜಕ್ಕೆ ಅವಿಸ್ಮರಣೀಯ ಕೊಡುಗೆಗಳನ್ನು ನೀಡಿದ ಹಲವು ಮಹಾತ್ಮರ ಹೆಸರುಗಳು ಪರಿಗಣನೆಗೆ ಬಂದಿಲ್ಲ. ಈ ಬಾರಿ ಶ್ರೇಷ್ಠತೆ, ಸಾಧನೆಗಳು, ಗುರುತಿಸಬೇಕಾದ ಅರ್ಹತೆ, ಅವರ ಪರ ಸೂಕ್ತ ನಾಮನಿರ್ದೇಶನಗಳನ್ನು ಮಾಡಲು ಸಂಘಟಿತ ಪ್ರಯತ್ನ ನಡೆಸುವಂತೆ ಕೇಂದ್ರ ತಿಳಿಸಿದೆ. 2022 ರ ವೇಳೆ ಈ ಪುರಸ್ಕಾರಗಳನ್ನು ಅರ್ಹರಿಗೆ ನೀಡಿ ಗೌರವಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.