ಬೆಂಗಳೂರು: ರಾಜ್ಯದಲ್ಲಿ 50 ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಎಲ್ಲಾ ಆಸ್ಪತ್ರೆಗಳೂ ವೈದ್ಯಕೀಯ ಆಮ್ಲಜನಕ ಘಟಕಗಳನ್ನು ಕಡ್ಡಾಯವಾಗಿ ಅಳವಡಿಕೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.
ಕೊರೋನಾ ಸೋಂಕು ಹೆಚ್ಚಾದ ಬಳಿಕ ವೈದ್ಯಕೀಯ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದೆ. ಭವಿಷ್ಯದಲ್ಲಿ ಇಂತಹ ಸ್ಥಿತಿ ನಿರ್ಮಾಣವಾದರೆ ಹೊರಗಿನಿಂದ ಆಮದು ಮಾಡಿಕೊಳ್ಳುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಆಸ್ಪತ್ರೆಗಳು ಅಗತ್ಯ ಪ್ರಮಾಣದಲ್ಲಿ ಆಕ್ಸಿಜನ್ ಮರುಪೂರಣ ವ್ಯವಸ್ಥೆ ಹೊಂದುವಂತೆ ಹೇಳಿದೆ. ಹಾಗೆಯೇ100 ಹಾಸಿಗೆಗಳಿಗಿಂತ ಹೆಚ್ಚು ಸಾಮರ್ಥ್ಯದ ಆಸ್ಪತ್ರೆಗಳು ಸಾಮಾನ್ಯ ದಿನಗಳಲ್ಲಿ ಅಗತ್ಯವಿರುವ ಎರಡು ಪಟ್ಟು ಆಮ್ಲಜನಕ ಶೇಖರಣೆ ಸಾಮರ್ಥ್ಯ ಹೊಂದಬೇಕು. ನಾಲ್ಕು ತಿಂಗಳಲ್ಲಿ ಇದು ಸಾಕಾರವಾಗಬೇಕು ಎಂದು ಇಲಾಖೆ ಸೂಚಿಸಿದೆ.
ಕೊರೋನಾ ಎರಡನೇ ಅಲೆಯಲ್ಲಿ ಆಕ್ಸಿಜನ್ ಅತಿ ಹೆಚ್ಚು ಬಳಕೆಯಾಗಿದೆ. ಈ ಪರಿಸ್ಥಿತಿ ಗಮನಿಸಿದರೆ ಆಸ್ಪತ್ರೆಗಳು ತಮ್ಮದೇ ಆದ ಆಕ್ಸಿಜನ್ ಘಟಕ ಹೊಂದುವುದು ತೀರಾ ಅವಶ್ಯಕ. ಘಟಕಗಳ ಸ್ಥಾಪನೆಯಿಂದ ಉತ್ಪಾದನಾ ಸಾಮರ್ಥ್ಯ ಹೆಚ್ಚಲಿದೆ ಎಂದು ಆರೋಗ್ಯ ವಲಯ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.