ನವದೆಹಲಿ: ಭಾರತವನ್ನು ಪ್ರಪಂಚ ಇಂದು ಹವಾಮಾನ ನ್ಯಾಯದ ನಾಯಕನಂತೆ ಕಾಣುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಾತನಾಡಿದ ಅವರು, ಹವಾಮಾನ ವಿಚಾರದಲ್ಲಿ ಭಾರತ ಬಹಳಷ್ಟು ದೂರ ಕ್ರಮಿಸಿದೆ. ಹವಾಮಾನ ವಿಚಾರಕ್ಕೆ ಸಂಬಂಧಿಸಿದಂತೆ ಭಾರತವನ್ನು ಸವಾಲೆಂದು ಪರಿಗಣಿಸಿದ್ದ ವಿಶ್ವದ ಇತರ ದೇಶಗಳು, ಭಾರತವನ್ನು ಹವಾಮಾನ ನ್ಯಾಯದ ನಾಯಕನಂತೆ ಕಾಣುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಎಥೆನಾಲ್ ಅನ್ನು ಜೈವಿಕ ಇಂಧನವಾಗಿ ಬಳಕೆ ಮಾಡುವ ಕಬ್ಬು ಬೆಳೆಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಳಕೆಯ ಪ್ರಯೋಜನದ ಬಗ್ಗೆ ಹೆಚ್ಚು ಅರಿವು ಮೂಡಿಸುವಂತೆ ಸಲಹೆ ನೀಡಿದ್ದಾರೆ. ತೈಲ ಮಾರುಕಟ್ಟೆ ಕಂಪೆನಿಗಳು ಎಥೆನಾಲ್ಗೆ 21 ಸಾವಿರ ಕೋಟಿ ಹೂಡಿಕೆ ಮಾಡಿದ್ದು, ಅದರಲ್ಲಿ ಹೆಚ್ಚಿನವು ರೈತರಿಗೆ ಲಭ್ಯವಾಗುವಂತೆ ಮಾಡಿವೆ ಎಂದು ಹೇಳಿದ್ದಾರೆ.
ವನ್ಯಜೀವಿ ಸಂರಕ್ಷಣೆ, ಸೌರಶಕ್ತಿ ಬೆಳವಣಿಗೆ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿನ ಪ್ರಗತಿಯನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ದೇಶದ ಪರಿಸರ ಉತ್ತಮಗೊಳಿಸುವುದರ ಜೊತೆಗೆ ಆರ್ಥಿಕತೆ ಮುಂದಕ್ಕೊಯ್ಯುವುದು ಸರ್ಕಾರದ ಯೋಜನೆಯಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಜೈವಿಕ ಇಂಧನ ಬಳಕೆ ಉತ್ತೇಜನಕ್ಕೆ ಪುಣೆಯಲ್ಲಿ ಕೈಗೊಳ್ಳಲಾದ ಇ-100 ಪ್ರಾಯೋಗಿಕ ಯೋಜನೆಗೆ ಪ್ರಧಾನಿ ಚಾಲನೆ ನೀಡಿದ್ದಾರೆ. ಉತ್ತಮ ಪರಿಸರಕ್ಕಾಗಿ ಜೈವಿಕ ಇಂಧನ ಬಳಕೆಗೆ ಉತ್ತೇಜನ ಎಂಬ ಧ್ಯೇಯದೊಂದಿಗೆ ಈ ಯೋಜನೆ ಆರಂಭಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.