ಬೆಂಗಳೂರು: ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ರಾಜ್ಯ ಸರ್ಕಾರವೇ ದರ ನಿಗದಿ ಮಾಡಲಾಗುವುದು ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಕಳೆದ 15 ದಿನಗಳ ಹಿಂದೆ ರಾಜ್ಯದಲ್ಲಿ ಕಪ್ಪು ಶಿಲೀಂಧ್ರ ಸೋಂಕಿನ ಚಿಕಿತ್ಸೆಗೆ ಔಷಧ ಕೊರತೆ ಇತ್ತು. ಆದರೆ ಆ ಪರಿಸ್ಥಿತಿ ಈಗಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಔಷಧ ಒದಗಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದರ ನಿಗದಿ ಮಾಡಲಾಗುತ್ತದೆ. ಬೇಕಾದ ಹಾಗೆ ದರ ನಿರೀಕ್ಷಿಸುವಂತಿಲ್ಲ ಎಂದು ಹೇಳಿದ್ದಾರೆ.
ಸಿಎಸ್ಆರ್ ಚಟುವಟಿಕೆಯಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು ಹಾಸಿಗೆ ಅಳವಡಿಸಲಾಗಿದೆ. ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯಲ್ಲಿ 24 ಹಾಸಿಗೆಗಳ ಐಸಿಯು ಘಟಕ ಆರಂಭಿಸಲಾಗಿದೆ. ಕೊರೋನಾ ಪ್ರಕರಣ ಕಡಿಮೆಯಾದರೂ ಸಿದ್ಧತೆಗಳನ್ನು ಪೂರೈಸಿಕೊಳ್ಳಲೇ ಬೇಕಾಗಿದೆ. ಆ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.