ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಸುಮಾರು 1784 ಕಪ್ಪು ಶಿಲೀಂಧ್ರ ಸೋಂಕಿತರ ಪ್ರಕರಣ ಪತ್ತೆಯಾಗಿದೆ, ಇವರಲ್ಲಿ 62 ಮಂದಿ ಗುಣಮುಖರಾಗಿದ್ದಾರೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್ ಸಂಬಂಧ ಜಿಲ್ಲಾವಾರು ವರದಿಗಳನ್ನು ತರಿಸಿಕೊಳ್ಳಲಾಗಿದೆ. ಸದ್ಯ 1564 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬ ಸೋಂಕಿತನ ಚಿಕಿತ್ಸೆಗೆ ಒಟ್ಟು 3-4 ವಾರಗಳು ಬೇಕಾಗುತ್ತದೆ. ಸಂಪೂರ್ಣ ಗುಣಮುಖರಾಗಲು ಐದರಿಂದ ಆರು ವಾರಗಳ ಅವಧಿ ತೆಗೆದುಕೊಳ್ಳುತ್ತದೆ. ಈವರೆಗೆ ಬ್ಲ್ಯಾಕ್ ಫಂಗಸ್ನಿಂದ 111 ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದರ ಚಿಕಿತ್ಸೆಗೆ ಆಂಪೋಟೆರಿಸಿನ್ ಬಿ ಔಷಧ ಬಳಕೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ 9750 ವಯಲ್ಸ್ ಆಂಪೋಟೆರಿಸಿನ್ ಬಿ ಔಷಧಗಳನ್ನು ಒದಗಿಸಿದೆ. ರಾಜ್ಯಕ್ಕೆ ಈ ವರೆಗೆ ಒಟ್ಟು 8,650 ವಯಲ್ಸ್ ಔಷಧ ದೊರೆತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.