ನವದೆಹಲಿ: ದೇಶಾದ್ಯಂತ 15 ರಾಜ್ಯಗಳಿಗೆ 26,281 ಟನ್ಗಳಿಗಿಂತ ಹೆಚ್ಚು ದ್ರವ ವೈದ್ಯಕೀಯ ಆಮ್ಲಜನಕವನ್ನು ತಲುಪಿಸುವ ಮೂಲಕ ಭಾರತೀಯ ರೈಲ್ವೆ ದಾಖಲೆ ಸೃಷ್ಟಿಸಿದೆ.
ವಿವಿಧ ರಾಜ್ಯಗಳಿಗೆ ಮೆಡಿಕಲ್ ಆಕ್ಸಿಜನ್ ತಲುಪಿಸುವ ಮೂಲಕ ರೈಲ್ವೆ ಪರಿಹಾರವನ್ನು ನೀಡುವ ಪ್ರಯಾಣವನ್ನು ಮುಂದುವರೆಸಿದೆ ಮತ್ತು ಇಲ್ಲಿಯವರೆಗೆ 376 ಆಕ್ಸಿಜನ್ ಎಕ್ಸ್ಪ್ರೆಸ್ಗಳು ತಮ್ಮ ಧ್ಯೇಯವನ್ನು ಪೂರ್ಣಗೊಳಿಸಿವೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.
ಆಕ್ಸಿಜನ್ ಎಕ್ಸ್ಪ್ರೆಸ್ಗಳು ಆಮ್ಲಜನಕವನ್ನು ಉತ್ತರಾಖಂಡ್, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಆಂಧ್ರಪ್ರದೇಶ, ರಾಜಸ್ಥಾನ, ತಮಿಳುನಾಡು, ಹರಿಯಾಣ, ತೆಲಂಗಾಣ, ಪಂಜಾಬ್, ಕೇರಳ, ದೆಹಲಿ, ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಅಸ್ಸಾಂ ಈ 15 ರಾಜ್ಯಗಳಿಗೆ ತಲುಪಿದೆ ಎಂದು ಸಚಿವಾಲಯ ತಿಳಿಸಿದೆ.
ರೈಲ್ವೆ ಹಪಾ, ಬರೋಡಾ, ಪಶ್ಚಿಮದಲ್ಲಿ ಮುಂಡ್ರಾ ಮತ್ತು ಪೂರ್ವದ ರೂರ್ಕೆಲಾ, ದುರ್ಗಾಪುರ, ಟಾಟನಗರ, ಅಂಗುಲ್ ಮುಂತಾದ ಸ್ಥಳಗಳಿಂದ ಆಮ್ಲಜನಕವನ್ನು ತೆಗೆದುಕೊಂಡು ನಂತರ ಅದನ್ನು ವಿವಿಧ ರಾಜ್ಯಗಳಿಗೆ ತಲುಪಿಸುತ್ತಿದೆ.
ಆಕ್ಸಿಜನ್ ಎಕ್ಸ್ಪ್ರೆಸ್ಗಳು ತಮ್ಮ ವಿತರಣೆಯನ್ನು 43 ದಿನಗಳ ಹಿಂದೆ ಮಹಾರಾಷ್ಟ್ರದಲ್ಲಿ ಏಪ್ರಿಲ್ 24 ರಂದು ಪ್ರಾರಂಭಿಸಿದ್ದವು.
ದಕ್ಷಿಣ ರಾಜ್ಯಗಳಾದ ಆಂಧ್ರಪ್ರದೇಶ ಮತ್ತು ಕರ್ನಾಟಕವು ಆಕ್ಸಿಜನ್ ಎಕ್ಸ್ಪ್ರೆಸ್ಗಳಿಂದ ತಲಾ ಮೂರು ಸಾವಿರ ಟನ್ಗಿಂತ ಹೆಚ್ಚು ದ್ರವ ವೈದ್ಯಕೀಯ ಆಮ್ಲಜನಕವನ್ನು ಪಡೆದಿವೆ ಎಂದು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.