ಶ್ರೀನಗರ: 270 ಕಿಮೀ ಉದ್ದದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಉದ್ದಕ್ಕೂ ನಿರ್ಮಿಸಲಾದ 8.5 ಕಿ.ಮೀ ಉದ್ದದ ಡಬಲ್ ಟ್ಯೂಬ್ ಬನಿಹಾಲ್-ಖಾಜಿಗುಂಡ್ ಸುರಂಗ ಶೀಘ್ರವೇ ಕಾರ್ಯಾರಂಭಿಸಲಿದೆ. ಪ್ರಸ್ತುತ ಸುರಂಗವನ್ನು ಪರೀಕ್ಷೆ ಮತ್ತು ಕಾರ್ಯಾರಂಭ ಪ್ರಕ್ರಿಯೆಗೆ ಒಳಪಡಿಸಲಾಗುತ್ತಿದೆ. ಚಳಿಗಾಲದಲ್ಲಿ ಈ ಸುರಂಗವು ಸಂಪರ್ಕದ ಲೈಫ್ಲೈನ್ ಆಗಿ ಕಾರ್ಯನಿರ್ವಹಿಸುತ್ತದೆ ಎಂದು ಮೂಲಗಳು ತಿಳಿಸಿವೆ.
ಸುರಂಗ ನಿರ್ಮಾಣದಲ್ಲಿ ತೊಡಗಿರುವ ಸಂಸ್ಥೆಯಾದ ನವಯುಗ ಎಂಜಿನಿಯರಿಂಗ್ ಕಂಪನಿ ಲಿಮಿಟೆಡ್ (ಎನ್ಇಸಿಎಲ್) ಅಧಿಕಾರಿಗಳ ಪ್ರಕಾರ, ಮುಂಬರುವ ವಾರಗಳಲ್ಲಿ ಇದು ಕಾರ್ಯರೂಪಕ್ಕೆ ಬರುವ ಸಾಧ್ಯತೆ ಇದೆ, .
“ನಾವು ವೆಂಟಿಲೇಷನ್ ಮತ್ತು ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯವಿರುವ ಎಲ್ಲಾ ಉಪಕರಣಗಳನ್ನು ಸ್ಥಾಪಿಸಿದ ನಂತರ ಪ್ರಸ್ತುತ ಕಾರ್ಯಾರಂಭಿಸಲು ಪರೀಕ್ಷೆ ನಡೆಸುವ ಪ್ರಕ್ರಿಯೆಯಲ್ಲಿ ತೊಡಗಿದ್ದೇವೆ” ಎಂದು ಎನ್ಇಸಿಎಲ್ನ ಮುಖ್ಯ ವ್ಯವಸ್ಥಾಪಕ ಮುನೀಬ್ ತಕ್ ತಿಳಿಸಿದ್ದಾರೆ.
ನಡೆಯುತ್ತಿರುವ ಕಾಮಗಾರಿ ಕೆಲವೇ ವಾರಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಮತ್ತು ವರದಿಯ ಪ್ರಕಾರ ಈ ತಿಂಗಳ ಅಂತ್ಯದ ವೇಳೆಗೆ ಸುರಂಗ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಎನ್ಇಸಿಎಲ್ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.