ಮಂಗಳೂರು: ಲಾಕ್ಡೌನ್ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಅನ್ಲಾಕ್ ಪ್ರಕ್ರಿಯೆ ನಡೆಯಬೇಕಾದರೆ ಕೊರೋನಾ ಪಾಸಿಟಿವಿಟಿ ಪ್ರಮಾಣ ಇಳಿಕೆಯಾಗಬೇಕಿದೆ. ಹಾಗಾಗಿ ಮುಂದಿನ ಒಂದು ವಾರ ಜನರ ಅನಗತ್ಯ ಸಂಚಾರ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಲಾಕ್ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವುದಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ತಂಡಗಳನ್ನು ಒಳಗೊಂಡಂತೆ ಜಿಲ್ಲಾದ್ಯಂತ 150 ತಪಾಸಣಾ ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.