ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಟ್ವಿಟರ್ ಭಾರತದ ಹೊಸ ಐಟಿ ನಿಯಮಗಳನ್ನು ಪಾಲಿಸಲು ಹೆಚ್ಚಿನ ಸಮಯವಕಾಶ ಬೇಕಿದೆ ಎಂಬ ಮನವಿಯನ್ನು ಸರ್ಕಾರದ ಮುಂದಿಟ್ಟಿದೆ.
ವರದಿಯ ಪ್ರಕಾರ, ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಟ್ವಿಟರ್ ದೇಶದ ಸಾಂಕ್ರಾಮಿಕ ಪರಿಸ್ಥಿತಿಯನ್ನು ಉಲ್ಲೇಖಿಸಿ ಹೊಸ ನಿಯಮಗಳನ್ನು ಅನುಸರಿಸಲು ಹೆಚ್ಚುವರಿ ಸಮಯವನ್ನು ಕೋರಿದೆ.
ಐಟಿ ನಿಯಮಗಳನ್ನು ಅನುಸರಿಸಲು ಹೆಚ್ಚಿನ ಸಮಯವನ್ನು ಕೋರಿ ಟ್ವಿಟರ್ ಐಟಿ ಸಚಿವಾಲಯಕ್ಕೆ ಪತ್ರ ಬರೆದಿದೆ. ಈ ಮೂಲಕ ನಿಯಮಗಳನ್ನು ಪಾಲಿಸುವ ಉದ್ದೇಶವನ್ನು ಅದು ವ್ಯಕ್ತಪಡಿಸಿದೆ ಆದರೆ ಸಾಂಕ್ರಾಮಿಕ ರೋಗದಿಂದಾಗಿ ತಕ್ಷಣಕ್ಕೆ ಸಾಧ್ಯವಾಗುತ್ತಿಲ್ಲ ಎಂದಿದೆ ಎಂದು ಮೂಲವೊಂದು ತಿಳಿಸಿದೆ.
ಮೇ 26 ರಿಂದ ಜಾರಿಗೆ ಬಂದ ಹೊಸ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಪಾಲಿಸಿ ಅಥವಾ ಪರಿಣಾಮಗಳಿಗೆ ಸಿದ್ಧರಾಗಿರಿ ಎಂದು ಸರ್ಕಾರ ಕಳೆದ ವಾರ ಕಂಪನಿಗೆ ಅಂತಿಮ ನೋಟಿಸ್ ನೀಡಿದ ನಂತರ ಟ್ವಿಟರ್ನಿಂದ ಈ ಪ್ರತಿಕ್ರಿಯೆ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.