ಮೂಡುಬಿದಿರೆ: ವಿಧಾನ ಸಭಾ ಕ್ಷೇತ್ರದ ಪಕ್ಷಿಕೆರೆಯ ನಿತಿನ್ ವಾಸ್ ಅವರು ಪರಿಸರ ಸ್ನೇಹಿ ಮಾಸ್ಕನ್ನು ತಯಾರಿಸಿ ವಿಶ್ವದಾದ್ಯಂತ ಮನ್ನಣೆ ಗಳಿಸಿದ್ದಾರೆ. ಆ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ಮಾಡಿದ್ದಾರೆ.
ಕೇವಲ ಪರಿಸರ ಸ್ನೇಹಿ ಮಾಸ್ಕ್ ಮಾತ್ರವಲ್ಲದೆ ಈ ಯುವಕ ಈ ಹಿಂದೆ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿಯೂ ಪ್ಲಾಸ್ಟಿಕ್ಗೆ ಪರ್ಯಾಯವಾಗಿ ಪರಿಸರಸ್ನೇಹಿ ತ್ರಿವರ್ಣ ಧ್ವಜಗಳನ್ನು ಸಹ ತಯಾರಿಸಿ, ಸ್ವಚ್ಛ ಮತ್ತು ಸ್ವಸ್ಥ ಪರಿಸರದ ಕಾಳಜಿಯನ್ನು ಜನರಲ್ಲಿ ಹುಟ್ಟಿಸಲು ಪ್ರಯತ್ನ ನಡೆಸಿದ್ದಾರೆ. ಇದೀಗ ಕೊರೋನಾ ಸಂದರ್ಭವನ್ನು ಸಹ ಸದುಪಯೋಗ ಮಾಡಿಕೊಂಡಿರುವ ಇವರು ಪರಿಸರಕ್ಕೆ ಮಾಕರವಲ್ಲದ ಮಾಸ್ಕ್ಗಳನ್ನು ತಯಾರಿಸಿ ಆ ಮೂಲಕವೂ ಜಾಗೃತಿ ಕಾರ್ಯಕ್ಕೆ ಮುಂದಾಗಿದ್ದಾರೆ. ಹಾಗೆಯೇ ಇದಕ್ಕಾಗಿ ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿಕೊಂಡಿದ್ದಾರೆ.
ಇವರ ಈ ಕಾರ್ಯವನ್ನು ಯುವಮೋರ್ಚಾ ಮಂಡಲದ ವತಿಯಿಂದ ಗುರುತಿಸಿ, ಭಾರತೀಯ ಜನತಾ ಪಕ್ಷದ ದ.ಕ. ಜಿಲ್ಲಾಧ್ಯಕ್ಷ ಸುದರ್ಶನ ಎಂ ಅವರು ಗೌರವಿಸಿ, ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಈಶ್ವರ್ ಕಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಂಡಲಾಧ್ಯಕ್ಷ ಸುನೀಲ್ ಆಳ್ವ, ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯಧರ್ಶಿ ಸೂರಜ್ ಜೈನ್ ಮಾರ್ನಾಡ್, ಜಿಲ್ಲಾ ಬಿ.ಜೆ.ಪಿ ಯುವಮೋರ್ಚಾ ಉಪಾಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲ್, ಮೂಡುಬಿದಿರೆ ಮಂಡಲದ ಯುವ ಮೋರ್ಚಾದ ಅಧ್ಯಕ್ಷ ಅಶ್ವಥ್ ಪಣಪಿಲ, ಪ್ರಧಾನ ಕಾರ್ಯದರ್ಶಿ ಧನುಷ್ ಕುಲಾಲ್ ಮತ್ತು ಯುವಮೋರ್ಚಾದ ಪಧಾದಿಕಾರಿಗಳು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.