ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಪಿಯುಸಿ ಅಂಕಗಳನ್ನು ಈ ಬಾರಿ ಪರಿಗಣಿಸದಿರಲು ಸರ್ಕಾರ ನಿರ್ಧರಿಸಿದೆ. ಜೊತೆಗೆ, ಸಿಇಟಿ ಪರೀಕ್ಷೆಗೂ ರಾಜ್ಯ ಸರ್ಕಾರ ದಿನ ನಿಗದಿ ಮಾಡಿದೆ.
ಈ ಸಂಬಂಧ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ಮಾತನಾಡಿದ್ದು, ಆಗಸ್ಟ್ ತಿಂಗಳ 28 ಮತ್ತು 29 ರಂದು ಸಿಇಟಿ ಪರೀಕ್ಷೆಗಳು ನಡೆಯಲಿದೆ. ಈ ವರ್ಷಕ್ಕೆ ಸಂಬಂಧಿಸಿದಂತೆ ಕೇವಲ ಸಿಇಟಿ ಶ್ರೇಣಿಗೆ ಅನುಗುಣವಾಗಿ ವೃತ್ತಿಪರ ಕೋರ್ಸ್ಗಳ ಪ್ರವೇಶ ನಡೆಯಲಿದೆ. ಪಿಯುಸಿ ಅಂಕ ಪರಿಗಣಿಸಲ್ಪಡುವುದಿಲ್ಲ. ಈ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುವ ಎಲ್ಲಾ ಮಂಡಳಿಗಳಿಗೂ ಪತ್ರ ಬರೆಯಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಸಿಇಟಿ ಪರೀಕ್ಷೆ 2021 ರ ಆಗಸ್ಟ್ 28, 29 ರಂದು ನಡೆಯಲಿದೆ. 28 ರಂದು ಗಣಿತ, ಜೀವಶಾಸ್ತ್ರ ಪರೀಕ್ಷೆ ನಡೆಯಲಿದೆ. 29 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಆಗಸ್ಟ್ 30 ರಂದು ಗಡಿನಾಡು ಮತ್ತು ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಹಾಗೆಯೇ ಜೂ. 15 ರಿಂದ ಸಿಇಟಿ ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ.
#KCET2021 ಪರೀಕ್ಷೆಯನ್ನು ರಾಜ್ಯಾದ್ಯಂತ ಸುಮಾರು 500ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ ಆಗಸ್ಟ್ 28, 29 ಹಾಗೂ 30ರಂದು ನಡೆಸಲಾಗುವುದು.
ಆಗಸ್ಟ್ 28 – ಜೀವಶಾಸ್ತ್ರ, ಗಣಿತ
ಆಗಸ್ಟ್ 29 – ಭೌತಶಾಸ್ತ್ರ, ರಸಾಯನಶಾಸ್ತ್ರ
ಆಗಸ್ಟ್ 30 – ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ pic.twitter.com/57qzDm0wBX
— Dr. C.N. Ashwath Narayan (@drashwathcn) June 8, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.