ಬೆಂಗಳೂರು: ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆರ್ಥಿಕ ಪ್ಯಾಕೇಜ್ನಲ್ಲಿ ಸರ್ಕಾರ ಬೀದಿ ಬದಿ ವ್ಯಾಪಾರಸ್ಥರಿಗೆ ಘೋಷಣೆ ಮಾಡಿದ ತಲಾ 2 ಸಾವಿರ ರೂ. ಸಹಾಯಧನ ವರ್ಗಾವಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು.
ಈ ಪರಿಹಾರ ಧನ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನದಯಾಳ್ ಅಂತ್ಯೋದಯ ಯೋಜನೆ – ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದಡಿ ನೋಂದಣಿ ಮಾಡಿಕೊಂಡ ಬೀದಿ ಬದಿ ವ್ಯಾಪಾರಸ್ಥರಿಗೆ ಮಾತ್ರವೇ ದೊರೆಯಲಿದೆ.
ಈ ಸಂಬಂಧ ಮಾತನಾಡಿದ ಸಿಎಂ ಯಡಿಯೂರಪ್ಪ, ನಗರದ ಸ್ಥಳೀಯ ಸಂಸ್ಥೆಗಳ ಸಮೀಕ್ಷೆ ಪ್ರಕಾರ 2,16,439 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ. ಅವರಿಗೆ ಗುರುತಿನ ಚೀಟಿ, ಮಾರಾಟ ಪ್ರಮಾಣ ಪತ್ರ ವಿತರಿಸಿ ವ್ಯಾಪಾರ ಮೂಲಸೌಕರ್ಯ ಕಲ್ಪಿಸಲಾಗಿದೆ. ಅಲ್ಲದೆ, ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಪೂರಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಫಲಾನುಭವಿಗಳ ಪೈಕಿ ಆಧಾರ್ ಜೋಡಣೆಯಾಗಿರುವ 1,91,684 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮೂಲಕ ತಲಾ 2 ಸಾವಿರ ದಂತೆ ಒಟ್ಟು 38.33 ಕೋಟಿ ರೂ. ಸರ್ಕಾರ ವರ್ಗಾಯಿಸುತ್ತಿದೆ ಎಂದೂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.