ಬೆಂಗಳೂರು: ಬಹುದಿನಗಳ ಬಿಡಿಎ ಮನವಿಯಂತೆ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಬಿಡಿಎ ಈ ಹಿಂದೆಯೇ ಪ್ರತ್ಯೇಕ ಪೊಲೀಸ್ ಠಾಣೆಗಾಗಿ ಸರ್ಕಾರಕ್ಕೆ ಮನವಿ ಮಾಡಿದೆ. ಈ ಮನವಿಯನ್ನು ಪರಿಗಣಿಸಿ ಬಿಡಿಎಗೆ ಪ್ರತ್ಯೇಕ ಪೊಲೀಸ್ ಠಾಣೆ ನೀಡಲಾಗುತ್ತದೆ. ಆ ಮೂಲಕ ಬಿಡಿಎಗೆ ಬರುವ ದೂರುಗಳನ್ನು ಈ ಠಾಣೆಯಲ್ಲಿ ಸ್ವೀಕರಿಸಿ, ತನಿಖೆ ನಡೆಸುವುದು ಸೇರಿದಂತೆ ಅಗತ್ಯ ಮಾನ್ಯತೆ ದೊರೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಡಿಎ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಅಗತ್ಯ ಸಲಹೆ ಸೂಚನೆಗಳನ್ನು ಸಹ ನೀಡಿದ್ದಾರೆ. ಫೆರಿಫೆರಲ್ ರಿಂಗ್ ರೋಡ್ ಯೋಜನೆ ಅನುಷ್ಠಾನಕ್ಕೆ ಶೀಘ್ರ ಟೆಂಡರ್ ಅಂತಿಮಗೊಳಿಸಿ, ಭೂಸ್ವಾಧೀನ ಪ್ರಕ್ರಿಯೆ ಚುರುಕುಗಾಳಿಸಲು ಸೂಚಿಸಿದ್ದಾರೆ. ಹಾಗೆಯೇ ನಾಡಪ್ರಭು ಕೆಂಪೇಗೌಡ ಬಡಾವಣೆ, ಡಾ ಕೆ ಶಿವರಾಮ ಕಾರಂತ ಬಡಾವಣೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ವೇಗ ನೀಡುವಂತೆ ಸೂಚಿಸಿದ್ದಾರೆ. ಹಾಗೆಯೇ ಬಿಡಿಎ ಖಾಲಿ ನಿವೇಶನಗಳು, ಫ್ಲ್ಯಾಟ್ಗಳು, ಮೂಲೆ ನಿವೇಶನಗಳ ಹರಾಜು ಪ್ರಕ್ರಿಯೆಗೆ ವೇಗ ನೀಡುವಂತೆ, ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.