ಬೆಂಗಳೂರು: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿಡಿಯೋ ಸಂವಾದ ನಡೆಸಿದ್ದು, ಕೊರೋನಾ ನಿರ್ವಹಣೆ, ಸಮಸ್ಯೆ, ಸವಾಲುಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.
ಕೊರೋನಾ ನಿಯಂತ್ರಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಗಣನೀಯ ಸೇವೆ ನೀಡುತ್ತಿದ್ದಾರೆ. ಆರು ವರ್ಷದ ಒಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ರಕ್ಷಣೆಗೆ ಸಂಬಂಧಿಸಿದಂತೆ ಅವರ ಸೇವೆ ಮುಖ್ಯವಾದುದು ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಹಾಗೆಯೇ ಕೊರೋನಾ ಮೂರನೆ ಅಲೆ ಆರಂಭವಾದರೆ ಅದರಿಂದ ಮಕ್ಕಳು ಹೆಚ್ಚು ತೊಂದರೆಗೆ ಒಳಗಾಗಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಅಪೌಷ್ಟಿಕ ಮಕ್ಕಳ ಗುರುತಿಸುವಿಕೆ, ಅನಾರೋಗ್ಯ ಪೀಡಿತ ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವಂತೆ ಅವರು ಕಿವಿಮಾತು ಹೇಳಿದ್ದಾರೆ. ಹಾಗೆಯೇ ಕೊರೋನಾ ಹಿನ್ನೆಲೆಯಲ್ಲಿ ಮನೆ ಮನೆ ಭೇಟಿ ಮೂಲಕ ಅರಿವು ಮೂಡಿಸುವುದನ್ನು ಮಾಡುವಂತೆಯೂ ಅವರು ಸೂಚಿಸಿದ್ದಾರೆ.
ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಕಾರ್ಯನಿರ್ವಹಣೆ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳು, ಗರ್ಭಿಣಿ, ಬಾಣಂತಿಯರಿಗೆ ಸರ್ಕಾರ ಒದಗಿಸುವ ಪೌಷ್ಟಿಕ ಆಹಾರ ತಲುಪಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡುತ್ತಿದ್ದು, ಸಿಎಂ ಯಡಿಯೂರಪ್ಪ ಶ್ಲಾಘಿಸಿದ್ದಾರೆ. ಹಾಗೆಯೇ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರನ್ನು ಸಹ ಕೊರೋನಾ ವಾರಿಯರ್ಸ್ ಎಂದು ಘೋಷಿಸಿದ್ದು, ಕೊರೋನಾ ಸೇವೆಯ ಸಂದರ್ಭದಲ್ಲಿ ಸೋಂಕು ತಗುಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಗಳಂತೆ ಪರಿಹಾರ ಧನ ವಿತರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.