ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಟೆಕ್ನಾಲಜಿ ಅಳವಡಿಸುವ ಮಹತ್ವದ ಚಿಂತನೆ ನಡೆಸಿದೆ.
ಸಿಡಬ್ಲ್ಯುಎಸ್ ಮತ್ತು ಡಿಎಸ್ಎಸ್ ಟೆಕ್ನಾಲಜಿಗಳನ್ನು ಸಾರಿಗೆ ಬಸ್ಸುಗಳಲ್ಲಿ ಅಳವಡಿಸುವ ಮೂಲಕ ಅಪಘಾತ ಪ್ರಕರಣಗಳು ಕಡಿಮೆಯಾಗುವಂತೆ ಮಾಡುವ ನಿಟ್ಟಿನಲ್ಲಿ ಸಂಸ್ಥೆ ಯೋಜನೆ ರೂಪಿಸುತ್ತಿದೆ. ಈ ತಂತ್ರಜ್ಞಾನದ ಸಹಾಯದಿಂದ ಬಸ್ಸಿನ ಸಮೀಪಕ್ಕೆ ಬರುವ ಇತರ ವಾಹನಗಳು, ಚಾಲಕ ನಿದ್ರಿಸಿ ಡಿವೈಡರ್ ಕಡೆ ಹೋಗುವುದು, ಮತ್ತೊಂದು ವಾಹನಕ್ಕೆ ಢಿಕ್ಕಿ ಹೊಡೆಯುವುದು ಮೊದಲಾದವುಗಳನ್ನು ತಡೆಯಲು ಸಾಧ್ಯವಾಗುತ್ತದೆ.
ಈ ತಂತ್ರಜ್ಞಾನ ಬೇರೆ ವಾಹನಗಳು ಬಸ್ನ ಹತ್ತಿರ ಬಂದಾಗ, ಚಾಲಕ ನಿದ್ರಿಸಿ ಅಪಘಾತವಾಗುವ ಸಂದರ್ಭದಲ್ಲಿ ಶಬ್ದ ಮಾಡಿ ಎಚ್ಚರಿಸುತ್ತದೆ. ಜೊತೆಗೆ ಕಂಟ್ರೋಲ್ ರೂಂಗೂ ಮಾಹಿತಿ ನೀಡುತ್ತದೆ. ಇದರಿಂದ ಅನಾಹುತಗಳನ್ನು ತಡೆಯುವುದು ಸಾಧ್ಯವಾಗಲಿದೆ. ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಇದೊಂದು ವಿನೂತನ ಪ್ರಯೋಗವಾಗಲಿದೆ.
ಕರಾರಸಾನಿಯ 1,044 ಬಸ್ಸುಗಳಲ್ಲಿ ಮೊದಲ ಹಂತದಲ್ಲಿ ಆರಂಭಿಕ ಹಂತದಲ್ಲಿ ಅಳವಡಿಸಲಾಗುವುದು. ಜನರ ಸುರಕ್ಷತೆ, ಅಪಘಾತ ರಹಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.