ನವದೆಹಲಿ: ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮದ ಅಡಿಯಲ್ಲಿ ದೇಶದಲ್ಲಿ ಇಲ್ಲಿಯವರೆಗೆ 24 ಕೋಟಿಗಿಂತ ಹೆಚ್ಚು ಕೋವಿಡ್ ಲಸಿಕೆ ಡೋಸ್ ಅನ್ನು ನೀಡಲಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ನಿನ್ನೆ ಸಂಜೆ 7 ಗಂಟೆಯವರೆಗೆ 24 ಗಂಟೆಗಳಲ್ಲಿ 31.31ಲಕ್ಷ ಲಸಿಕೆ ಡೋಸ್ ಅನ್ನು ನೀಡಲಾಗದೆ.
ಈ ವರ್ಷದ ಜನವರಿ 16 ರಂದು ದೇಶವು ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಪ್ರಾರಂಭಿಸಿತ್ತು.
ಬಿಹಾರ, ದೆಹಲಿ, ಗುಜರಾತ್, ಹರಿಯಾಣ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳು 18-44 ವರ್ಷ ವಯಸ್ಸಿನ 10 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.