ನವದೆಹಲಿ: ಕೋವಿಡ್-19 ಮೂರನೇ ಅಲೆಯು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಗುರಿಯಾಗಿಸಬಹುದೆಂಬ ಆತಂಕದ ಮಧ್ಯೆ ಮಕ್ಕಳಲ್ಲಿ ಕೋವಿಡ್-19 ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ವೈದ್ಯಕೀಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಕೇಂದ್ರ ಆರೋಗ್ಯ ಸಚಿವಾಲಯವು ‘ಮಕ್ಕಳಲ್ಲಿ ಕೋವಿಡ್-19 ನಿರ್ವಹಣೆಗೆ ಸಮಗ್ರ ಮಾರ್ಗಸೂಚಿಗಳು’ ಎಂಬ ವಿವರವಾದ ದಾಖಲೆಯನ್ನು ಬಿಡುಗಡೆ ಮಾಡಿದೆ.
“ರೆಮ್ಡೆಸಿವಿರ್ ಔಷಧವನ್ನು ಮಕ್ಕಳಿಗೆ ಬಳಸಲು ಶಿಫಾರಸು ಮಾಡಲಾಗಿಲ್ಲ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ರೆಮ್ಡೆಸಿವಿರ್ಗೆ ಬಳಕೆಗೆ ಸಂಬಂಧಿಸಿದಂತೆ ಸಾಕಷ್ಟು ಸುರಕ್ಷತಾ ಮತ್ತು ಪರಿಣಾಮಕಾರಿತ್ವದ ಮಾಹಿತಿಯ ಕೊರತೆಯಿದೆ” ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ಹೃದಯರಕ್ತನಾಳದ ವ್ಯಾಯಾಮ ಸಹಿಷ್ಣುತೆ (cardiopulmonary exercise tolerance) ಯನ್ನು ನಿರ್ಣಯಿಸಲು ಪೋಷಕರ ಮೇಲ್ವಿಚಾರಣೆಯಲ್ಲಿ 12 ವರ್ಷದೊಳಗಿನ ಮಕ್ಕಳ ಮೇಲೆ 6 ನಿಮಿಷಗಳ ನಡಿಗೆ ಪರೀಕ್ಷೆಯನ್ನು ನಡೆಸಬಹುದಾಗಿದೆ ಎಂದು ತಿಳಿಸಲಾಗಿದೆ.
“ಪಲ್ಸ್ ಆಕ್ಸಿಮೀಟರ್ ಅನ್ನು ಮಕ್ಕಳ ಬೆರಳಿಗೆ ಲಗತ್ತಿಸಿ ಮತ್ತು ಮಗುವಿಗೆ ಕೋಣೆಯೊಳಗೆ 6 ನಿಮಿಷಗಳ ಕಾಲ ನಿರಂತರವಾಗಿ ನಡೆಯುವಂತೆ ಹೇಳಬೇಕು. ಈ ಸಂದರ್ಭದಲ್ಲಿ ಉಸಿರಿನ ಸಮಸ್ಯೆ, ಆಮ್ಲಜನಕ ಕಡಿಮೆಯಾಗುವುದು ಮುಂತಾದ ಲಕ್ಷಣ ಕಂಡು ಬಂದರೆ ಆಸ್ಪತ್ರೆಗೆ ದಾಖಲಿಸಲು ಶಿಫಾರಸ್ಸು ಮಾಡಲಾಗುತ್ತದೆ” ಎಂದಿದೆ.
ಮನೆಯೊಳಗಿಗೆ ಪ್ರತಿ 6 ರಿಂದ 8 ಗಂಟೆಗಳಿಗೊಮ್ಮೆ ಪರೀಕ್ಷೆಯನ್ನು ಪುನರಾವರ್ತಿಸಬಹುದು. ಅನಿಯಂತ್ರಿತ ಆಸ್ತಮಾ ರೋಗವಿದ್ದರೆ ಪರೀಕ್ಷೆಯನ್ನು ಮಾಡದಿರುವುದು ಒಳಿತು ಎಂದಿದೆ.
“ಸ್ಟೀರಾಯ್ಡ್ಗಳನ್ನು ಸರಿಯಾದ ಸಮಯದಲ್ಲಿ, ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ಅವಧಿಗೆ ಬಳಸಬೇಕು” ಎಂದು ಕೇಂದ್ರವು ದಾಖಲೆಯಲ್ಲಿ ತಿಳಿಸಿದೆ.
5 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮುಖಗವಸುಗಳನ್ನು ಧರಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ, ಆದರೆ 6-11 ವರ್ಷ ವಯಸ್ಸಿನವರು ಮುಖಗವಸನ್ನು ಪೋಷಕರ ನೇರ ಮೇಲ್ವಿಚಾರಣೆಯಲ್ಲಿ ಸುರಕ್ಷಿತವಾಗಿ ಮತ್ತು ಸೂಕ್ತವಾಗಿ ಬಳಸಬೇಕು. 12 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಮಕ್ಕಳು ಮುಖಗವಸನ್ನು ಕಡ್ಡಾಯವಾಗಿ ಧರಿಸಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.