ಭಟ್ಕಳ: ಕಳೆದ ಆರು ವರ್ಷಗಳ ಕಾಲದಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ಥಾನದ ಖತೀಜಾ ಮೆಹೆರಿನ್ ಎಂಬ ಮಹಿಳೆಯನ್ನು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಿಗೆ ಸುಳ್ಳು ದಾಖಲೆ ನೀಡಿ ಪಡಿತರ ಚೀಟಿ, ಆಧಾರ್, ಜನನ ಪ್ರಮಾಣ ಪತ್ರ, ಪಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಪಡೆದುಕೊಂಡಿರುವುದು ಬಯಲಾಗಿದೆ. ಅದೆಲ್ಲವನ್ನೂ ಪೊಲೀಸರು ವಶಕ್ಕೆ ಗುರುತಿಸಿಕೊಂಡಿದ್ದಾರೆ.
ಖತೀಜಾ ಕಳೆದ ಎಂಟು ವರ್ಷಗಳ ಹಿಂದೆ ಭಟ್ಕಳದ ನವಾಯತ ಕಲೋನಿ ನಿವಾಸಿ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ಎಂಬಾತನನ್ನು ದುಬೈನಲ್ಲಿ ಮದುವೆಯಾಗಿದ್ದಳು. 2014 ರಲ್ಲಿ ಮೂರು ತಿಂಗಳ ವೀಸಾ ಪಡೆದು ಭಟ್ಕಳಕ್ಕೆ ಬಂದು ಮತ್ತೆ ದುಬೈಗೆ ತೆರಳಿದ್ದಳು. ಬಳಿಕ 2015 ರಲ್ಲಿ ಕಳ್ಳ ಮಾರ್ಗದ ಮೂಲಕ ಭಾರತಕ್ಕೆ ಪ್ರವೇಶಿಸಿದ್ದಳು. ಈಕೆಗೆ ಮೂರು ಮಕ್ಕಳಿರುವುದಾಗಿ ಪೊಲೀಸರು ಮಾಹಿತಿ ಬಹಿರಂಗಪಡಿಸಿದ್ದಾರೆ.
ಮಹಿಳೆ ಅಕ್ರಮವಾಗಿ ನೆಲೆಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಈಕೆಯನ್ನು ಬಂಧಿಸಿದ್ದಾರೆ. ಈಕೆಯ ವಿರುದ್ಧ ವಿದೇಶಿಗರ ನೋಂದಣಿ ಕಾಯ್ದೆ ಉಲ್ಲಂಘನೆ, ಇತರ ಭಾರತೀಯ ದಂಡ ಸಂಹಿತೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.