ನವದೆಹಲಿ: ಭಾರತದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರ ಹೆಸರುಗಳನ್ನು ನಾಮನಿರ್ದೇಶನ ಮಾಡುವಂತೆ ಕೇಂದ್ರ ಸರ್ಕಾರ ನಾಗರಿಕರಿಗೆ ಮನವಿ ಮಾಡಿದೆ.
ಈ ಪ್ರಶಸ್ತಿಗೆ ನಾಮನಿರ್ದೇಶನ ಅಥವಾ ಶಿಫಾರಸ್ಸು ಮಾಡುವುದಕ್ಕೆ ಎಲ್ಲರಿಗೂ ಮುಕ್ತ ಅವಕಾಶ ಇದೆ. ಇದಕ್ಕೆ ಸೆ. 15 ಕೊನೆಯ ದಿನವಾಗಿದ್ದು, ಅದರ ಮೊದಲೇ ಅರ್ಹರನ್ನು ನಾಮನಿರ್ದೇಶನ ಮಾಡುವಂತೆ ಸರ್ಕಾರ ಮನವಿ ಮಾಡಿದೆ.
ನಾಮನಿರ್ದೇಶನ, ಶಿಫಾರಸ್ಸುಗಳನ್ನು http://padmaawards.gov.in. ಮೂಲಕವೇ ಸಲ್ಲಿಸುವಂತೆ ಕೇಂದ್ರ ಹೇಳಿದೆ. ದೇಶದ ಪ್ರತಿಷ್ಠಿತ ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದವರನ್ನು ಗಣರಾಜ್ಯೋತ್ಸವ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಇದರಲ್ಲಿ ನಾಗರಿಕರು ಸ್ವತಃ ತಮ್ಮ ಹೆಸರು ನಾಮನಿರ್ದೇಶನ ಮಾಡಲು ಅಥವಾ ಇತರ ವ್ಯಕ್ತಿಗಳ ಹೆಸರನ್ನು ಶಿಫಾರಸ್ಸು ಮಾಡಲು ಅವಕಾಶ ಇದೆ ಎಂದು ಸರ್ಕಾರ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.