ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಚೇತರಿಕೆ ಪ್ರಮಾಣ 91% ರ ಗಡಿ ದಾಟಿದೆ.
ಕಳೆದ ವರ್ಷದ ಕೊರೋನಾ ಮೊದಲನೇ ಅಲೆಯ ಸಂದರ್ಭದಲ್ಲಿ ಚೇತರಿಕೆ ಪ್ರಮಾಣ 90% ದಾಟಲು ಅಕ್ಟೋಬರ್ ವರೆಗೆ ಸಮಯ ತೆಗೆದುಕೊಂಡಿತ್ತು. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಶೀಘ್ರಗತಿಯಲ್ಲಿ ಚೇತರಿಕೆ ಪ್ರಮಾಣ ಈಗಾಗಲೇ ಏರಿಕೆಯಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದೆ.
ಗುರುವಾರ ಒಂದೇ ದಿನದಲ್ಲಿ 15,721 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿಯೂ ಚೇತರಿಕೆ ಪ್ರಮಾಣ ಏರಿಕೆಯಾಗುತ್ತಿದೆ. ನಗರದಲ್ಲಿ ಚೇತರಿಕೆ ಪ್ರಮಾಣ ಸದ್ಯ 90% ಗಡಿ ದಾಟಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವ ಜೊತೆಗೆ, ಪಾಸಿಟಿವಿಟಿ ದರ ಕೂಡ ಇಳಿಕೆಯಾಗುತ್ತಿದೆ. ನಿನ್ನೆ ರಾಜ್ಯದಲ್ಲಿ 194 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ 1.18% ಗಳಷ್ಟಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.