ನವದೆಹಲಿ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಪಿಎಂ ಮೋದಿಯವರ ನಿವಾಸದಲ್ಲಿ ಉಭಯ ನಾಯಕರ ನಡುವೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆದಿದೆ.
“ಇಂದು, ಗೌರವಾನ್ವಿತ ಪಿಎಂ ಮೋದಿಯವರನ್ನು ಭೇಟಿಯಾಗಿ ಅವರ ಮಾರ್ಗದರ್ಶನ ಪಡೆಯುವ ಭಾಗ್ಯ ನನಗೆ ದೊರೆತಿದೆ. ಒತ್ತಡದಲ್ಲೂ ಸಮಯ ತೆಗೆದುಕೊಂಡಿದ್ದಕ್ಕಾಗಿ ನಾನು ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ” ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಪ್ರಧಾನ ಮಂತ್ರಿಯೊಂದಿಗಿನ ಫೋಟೋ ಸಮೇತ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ .
ಸ್ವಲ್ಪ ಸಮಯದ ನಂತರ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ನಿವಾಸಕ್ಕೆ ತೆರಳಿದ್ದಾರೆ.
ಗುರುವಾರ ಯೋಗಿ ಆದಿತ್ಯನಾಥ್ ಅವರು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ 90 ನಿಮಿಷಗಳ ಸುದೀರ್ಘ ಸಭೆ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.