ಬೆಂಗಳೂರು: ಸಾರ್ವಜನಿಕ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಶಬ್ದ ಮಾಲಿನ್ಯ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉನ್ನತ ಅಧಿಕಾರಿಗಳಿಗೆ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ಸೂಚಿಸಿದ್ದಾರೆ.
ಶಬ್ದ ಮಾಲಿನ್ಯಕ್ಕೆ ಕಾರಣರಾದವರ ವಿರುದ್ಧ ಪರಿಸರ ಸಂರಕ್ಷಣಾ ಕಾಯ್ದೆ 1986 ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ರಾಜ್ಯದಲ್ಲಿ ನಿರ್ಮಾಣ ಹಂತದ ಕಟ್ಟಡಗಳು, ಕೈಗಾರಿಕಾ ಚಟುವಟಿಕೆಗಳು, ಜನರೇಟರ್, ಲೌಡ್ ಸ್ಪೀಕರ್, ಹಾರ್ನ್, ಯಾಂತ್ರಿಕ ಸಾಧನಗಳಿಂದ ಶಬ್ದ ಮಾಲಿನ್ಯ ಹೆಚ್ಚುತ್ತಿದೆ. ಇದು ಜನರ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೀಗಾಗಿ ಇದರ ನಿಯಂತ್ರಣ ಅಗತ್ಯ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯಸ್ಥ ಬ್ರಿಜೇಶ್ ಕುಮಾರ್, ಎರಡು ತಿಂಗಳ ಹಿಂದೆಯೇ ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದಂತೆ ಡಿಜಿಪಿ ಅವರಿಗೆ ಪತ್ರ ಬರೆಯಲಾಗಿತ್ತು. ಪ್ರಸ್ತುತ ಈ ಕಾಯ್ದೆ ಸಂಬಂಧ ಪರಿಶೀಲನೆ ನಡೆಯುತ್ತಿದೆ. ಆ ಬಳಿಕ ಆಯಾ ಸಂಸ್ಥೆಗಳ ಜವಾಬ್ದಾರಿಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಲಾಗುತ್ತದೆ. ಈ ಸಂಬಂಧ ಹೈಕೋರ್ಟ್ಗೂ ಮೂರು ಅರ್ಜಿಗಳು ಸಲ್ಲಿಕೆಯಾಗಿರುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.