ಲಕ್ನೋ: ಯುಪಿಯ ಕಾಂಗ್ರೆಸ್ ಮುಖಂಡ ಜಿತಿನ್ ಪ್ರಸಾದ್ ಅವರು ಬಿಜೆಪಿಗೆ ಬಂದ ಒಂದು ದಿನದ ನಂತರ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಗುರುವಾರ ಭೇಟಿಯಾದರು, ಇದು ವಿಧಾನಸಭಾ ಚುನಾವಣೆಗೆ ಮುನ್ನ ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕತ್ವದಲ್ಲಿ ಸಂಭವನೀಯ ಬದಲಾವಣೆಯ ಸಂಭವಿಸಲಿದೆ ಎಂಬ ಊಹಾಪೋಹಗಳು ಹುಟ್ಟಲು ಕಾರಣವಾಯಿತು.
ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ಚುನಾವಣೆ ಇರುವುದರಿಂದ ನಾಯಕತ್ವ ಬದಲಾವಣೆಯ ಚರ್ಚೆ ದೊಡ್ಡ ಮಟ್ಟದಲ್ಲೇ ಸುದ್ದಿ ಮಾಡುತ್ತಿದೆ. ಆದರೆ ಬಿಜೆಪಿ ಮೂಲಗಳ ಪ್ರಕಾರ, ಪಕ್ಷದ ನಾಯಕತ್ವದಲ್ಲಿ ಯಾವುದೇ ಬದಲಾವಣೆಗಳು ನಡೆಯುತ್ತಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯವರೆಗೂ ಯೋಗಿ ಅವರೇ ಸಿಎಂ ಆಗಿ ಮುಂದುವರೆಯುವುದು ಖಚಿತ.
ಯುಪಿ ರಾಜ್ಯದಲ್ಲಿ ಸಮನ್ವಯ ಸಮಿತಿಯನ್ನು ರಚಿಸಲಾಗುತ್ತಿದೆ ಎಂದು ಮೂಲಗಳು ಬಹಿರಂಗಪಡಿಸಿವೆ, ಇದರಲ್ಲಿ ಕೇಂದ್ರದ ಜೊತೆಗೆ ರಾಜ್ಯದ ಹಿರಿಯ ನಾಯಕರು ಕೂಡ ಇರಲಿದ್ದಾರೆ. ಸಮಿತಿ ನೇರವಾಗಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ವರದಿ ಸಲ್ಲಿಸಲಿದೆ. ಪಶ್ಚಿಮ ಬಂಗಾಳ ಚುನಾವಣೆಯಲ್ಲಿನ ಸೋಲಿನ ನಂತರ ಬಿಜೆಪಿ ಯುಪಿ ರಾಜ್ಯದಲ್ಲಿ ಸರ್ಕಾರವನ್ನು ಉಳಿಸಿಕೊಳ್ಳುವ ಸಾಧ್ಯತೆಗಳನ್ನು ಬಲಪಡಿಸುವ ಕ್ರಮವಾಗಿಯೂ ಸಮನ್ವಯ ಸಮಿತಿಯ ರಚನೆಯನ್ನು ನೋಡಲಾಗುತ್ತಿದೆ.
ಕೇಂದ್ರ ನಾಯಕರನ್ನು ಸಮನ್ವಯ ಸಮಿತಿಯಲ್ಲಿ ಸೇರಿಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಇರುವ ಅಂತರವನ್ನು ಕಡಿಮೆ ಮಾಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.