ಬೆಂಗಳೂರು: ರಾಜ್ಯದ ವಿವಿಧ ಮಠಗಳ ಸುಮಾರು ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ಅವರನ್ನು ಭೇಟಿ ಮಾಡಿ, ಸಂಸ್ಕೃತ ವಿಶ್ವವಿದ್ಯಾಲಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.
ಸಂಸ್ಕೃತ ವಿವಿಗೆ ಕನ್ನಡಿಗರನ್ನೇ ಕುಲಪತಿಗಳನ್ನಾಗಿ ನೇಮಕ ಮಾಡುವುದು, ಸಂಸ್ಕೃತ ಪ್ರಸರಣಕ್ಕೆ ಹೆಚ್ಚಿನ ಪ್ರೋತ್ಸಾಹ ಮತ್ತು ಬಯಲು ಸೀಮೆಗೆ ನೀರಾವರಿ ವ್ಯವಸ್ಥೆ ಕಲ್ಪಿಸುವಂತೆ ಸ್ವಾಮೀಜಿಗಳು ಡಿಸಿಎಂ ಜೊತೆ ಚರ್ಚೆ ನಡೆಸಿದರು. ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್ ವತಿಯಿಂದ ಕೊಳದ ಮಠದ ಶಾಂತವೀರ ಸ್ವಾಮೀಜಿ, ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮೆ ಮಠದ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.
ಈ ಸಂಬಂಧ ಡಾ ಅಶ್ವತ್ಥ್ ನಾರಾಯಣ ಅವರು ಟ್ವೀಟ್ ಮಾಡಿದ್ದು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಅನೇಕ ಆಡಳಿತಾತ್ಮಕ ವಿಚಾರಗಳ ಕುರಿತು ಚರ್ಚಿಸಲು ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟ ಸೇವಾ ಟ್ರಸ್ಟ್ ಅವರ ನಿಯೋಗದಡಿ ಹಲವು ಮಠಾಧಿಪತಿಗಳು ಭೇಟಿ ನೀಡಿದರು. ನಮ್ಮ ಸನಾತನ ಸಂಸ್ಕೃತಿ, ಪರಂಪರೆಗಳ ಸಂರಕ್ಷಣೆ ಹಾಗೂ ಪೋಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಬದ್ಧ ಎಂದು ತಿಳಿಸಿದ್ದಾರೆ.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಅನೇಕ ಆಡಳಿತಾತ್ಮಕ ವಿಚಾರಗಳ ಕುರಿತು ಚರ್ಚಿಸಲು ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟ ಸೇವಾ ಟ್ರಸ್ಟ್ ಅವರ ನಿಯೋಗದಡಿ ಹಲವು ಮಠಾಧಿಪತಿಗಳು ಭೇಟಿ ನೀಡಿದರು.
ನಮ್ಮ ಸನಾತನ ಸಂಸ್ಕೃತಿ, ಪರಂಪರೆಗಳ ಸಂರಕ್ಷಣೆ ಹಾಗೂ ಪೋಷಣೆಗೆ ಬೇಕಾದ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಬದ್ಧ. pic.twitter.com/4ezmkwF9u8
— Dr. C.N. Ashwath Narayan (@drashwathcn) June 11, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.