ಬೆಂಗಳೂರು: ಇಂದಿನಿಂದ ರಾಜ್ಯದ 11 ಜಿಲ್ಲೆಗಳನ್ನು ಹೊರತುಪಡಿಸಿದಂತೆ ಉಳಿದೆಲ್ಲಾ ಜಿಲ್ಲೆಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಜಾರಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲೂ ಕೊರೋನಾ ಪಾಸಿಟಿವಿಟಿ ದರ ಏರಿಕೆಯಾಗದಂತೆ ಎಚ್ಚರಿಕೆ ವಹಿಸುವ ಎಲ್ಲಾ ಜವಾಬ್ದಾರಿಗಳೂ ಜನರ ಮೇಲಿದೆ ಎಂದು ಬಿಬಿಎಂಪಿ ತಿಳಿಸಿದೆ.
ಈ ಸಂಬಂಧ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಮಾತನಾಡಿ, ಬೆಂಗಳೂರಿನಲ್ಲಿ ಸದ್ಯ ಕೊರೋನಾ ಸೋಂಕು ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಂತ ಹಂತವಾಗಿ ನಗರದಲ್ಲೂ ಇಂದಿನಿಂದ ಅನ್ಲಾಕ್ ಪ್ರಕ್ರಿಯೆ ಜಾರಿಗೆ ಬರಲಿದೆ. ಈ ಸಂದರ್ಭದಲ್ಲಿ ಮತ್ತೆ ಸೋಂಕು ಏರಿಕೆಯಾಗದಂತೆ ಎಚ್ಚರ ವಹಿಸಬೇಕಾಗಿದೆ. ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಬಸ್, ರೈಲು, ವಿಮಾನ ನಿಲ್ದಾಣಗಳಲ್ಲಿಯೂ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಹೇಳಿದ್ದಾರೆ.
ಜೊತೆಗೆ ಸೋಂಕಿತರ ಸಂಪರ್ಕದಲ್ಲಿರುವವರನ್ನು ಪತ್ತೆ ಹಚ್ಚುವ ಕಾರ್ಯ ಮಾಡಲಾಗುತ್ತದೆ. ಸೋಂಕಿನ ಲಕ್ಷಣಗಳು ಕಂಡಲ್ಲಿ ಜನರು ತಕ್ಷಣವೇ ತಾವಾಗಿಯೇ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಹರಡುವುದನ್ನು ತಡೆಯಲು ಮುಂದಾಗಬೇಕು. ಜೊತೆಗೆ ಕಡ್ಡಾಯವಾಗಿ ಕೊರೋನಾ ಮಾರ್ಗಸೂಚಿಗಳನ್ನು ಸಹ ಪಾಲಿಸಬೇಕು ಎಂದು ಹೇಳಿದ್ದಾರೆ.
ಲಸಿಕೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಗರದಲ್ಲಿ ಜನರ ಅಗತ್ಯಗಳಿಗೆ ಅನುಸಾರವಾಗಿ ಲಸಿಕೆ ನೀಡಲಾಗುತ್ತಿದೆ. ಹೆಚ್ಚು ಜನರಿಗೆ ಶೀಘ್ರದಲ್ಲೇ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.