ಬೆಂಗಳೂರು: ಮಂಡ್ಯ ಒಕ್ಕೂಟ (ಮನ್ಮುಲ್) ದಲ್ಲಿ ಹಾಲಿಗೆ ನೀರು ಬೆರೆಸಿ ಅಕ್ರಮ ಎಸಗಿರುವ ಪ್ರಕರಣದ ಬಗ್ಗೆ ಸಿಐಡಿ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮನ್ಮುಲ್ನಲ್ಲಿ ಹಾಲಿಗೆ ನೀರು ಬೆರಕೆ ಮಾಡಿ ಅಕ್ರಮ ಎಸಗಿರುವುದು ಗಮನಕ್ಕೆ ಬಂದಿದೆ. ಈ ಸಂಬಂಧ ಪ್ರಾಥಮಿಕ ತನಿಖೆ ನಡೆಸುವಂತೆ ಆದೇಶಿಸಲಾಗಿದೆ. ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರನ್ನು ಹಿಂದಕ್ಕೆ ಕರೆಸಿ ಅಲ್ಲಿಗೆ ಹೊಸ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಿರುವುದಾಗಿ ಅವರು ಹೇಳಿದ್ದಾರೆ.
ಈ ಸಂಬಂಧ ಐವರು ತಪ್ಪಿತಸ್ಥ ಅಧಿಕಾರಿಗಳು ಅಮಾನತಿನಲ್ಲಿದ್ದಾರೆ. ಹಾಲು ಒಕ್ಕೂಟದ ಮೇಲೆ ಕಲಂ 60 ರ ಅನ್ವಯ ತನಿಖೆ ನಡೆಸಲಾಗುತ್ತಿದೆ. ಅದರಂತೆಯೇ ತಪ್ಪಿತಸ್ಥ ಹಾಲು ಉತ್ಪಾದಕರ ಸಂಘದ ಮೇಲೆ ವಿಚಾರಣೆಗೂ ಆದೇಶಿಸಿರುವುದಾಗಿ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.