ಆಗ್ರಾ: ಉತ್ತರಪ್ರದೇಶದ ಆಗ್ರಾ ಗ್ರಾಮೀಣ ಭಾಗದ ಧಾರಿಯೈ ಗ್ರಾಮದಲ್ಲಿ ಸೋಮವಾರ ಆಡುತ್ತಿದ್ದ ಸಂದರ್ಭದಲ್ಲಿ ಐದು ವರ್ಷದ ಮಗು 150 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದು, ನಿರಂತರ ರಕ್ಷಣಾ ಕಾರ್ಯಾಚರಣೆಯ ಬಳಿಕ ಸೇನೆ ಮಗುವನ್ನು ಯಶಸ್ವಿಯಾಗಿ ಹೊರಕ್ಕೆ ತಂದಿದೆ.
ಆಗ್ರಾ ಗ್ರಾಮೀಣ ಪ್ರದೇಶದ ಫತೇಹಾಬಾದ್ನ ನಿಬೋಹರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ 8: 30 ರ ಸುಮಾರಿಗೆ ಮಗು ಬೋರ್ವೆಲ್ಗೆ ಬಿದ್ದಿದೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಾಗಿನಿಂದ ಮಗುವನ್ನು ರಕ್ಷಿಸುವ ಕಾರ್ಯ ನಡೆದಿದೆ ಎನ್ನಲಾಗಿದೆ.
ತನ್ನ ತಂದೆಯೇ ಅಗೆದ ಬೋರ್ವೆಲ್ಗೆ ಮಗು ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
ಮಗುವಿನ ರಕ್ಷಣೆಗೆ ಸೇನೆಯ ನೆರವನ್ನು ತೆಗೆದುಕೊಳ್ಳಲಾಗಿದೆ. ನಾಲ್ಕು ಗಂಟೆಗಳ ನಿರಂತರ ಕಾರ್ಯಾಚರಣೆಯ ಬಳಿಕ ಭಾರತೀಯ ಸೇನೆಯು ಐದು ವರ್ಷದ ಶಿವ ಎಂಬ ಹೆಸರಿನ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದೆ.
In a 4 hr long Operation, Indian Army Successfully Rescued 10 yr Old Shiva Who Fell into 100 ft Deep Borewell in Agra pic.twitter.com/8IzS5jwmHu
— Megh Updates 🚨 (@MeghUpdates) June 14, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.