ಬೆಂಗಳೂರು: ಕೆಎಂಸಿ (ಕರ್ನಾಟಕ ವೈದ್ಯಕೀಯ ಪರಿಷತ್) ಗೆ ನಡೆದಿದ್ದ ಚುನಾವಣೆಯನ್ನು ರದ್ದುಪಡಿಸಿರುವ ಹೈಕೋರ್ಟ್, ಮುಂದಿನ ಆರು ತಿಂಗಳೊಳಗೆ ಮರು ಚುನಾವಣೆ ನಡೆಸುವಂತೆ ಆದೇಶಿಸಿದೆ.
ಸಹಕಾರ ಸಂಘಗಳ ಜಂಟಿ ರಿಜಿಸ್ಟ್ರಾರ್ ಡಿ ಪಾಂಡುರಂಗ ಗರಗ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತಕ್ಕೆ ಸೂಚಿಸಿದೆ. ಈ ಸಂಬಂಧ ಗಚಿನಮನಿ ನಾಗನಾಥ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಚುನಾವಣೆ ನಡೆಸಲು ನಾಲ್ಕು ವರ್ಷಗಳ ಕಾಲ ವಿಳಂಬ ಮಾಡಲಾಗಿದೆ. ಮತದಾರರ ಪಟ್ಟಿ ಅಂತಿಮಗಳಿಸುವ ವಿಚಾರದಲ್ಲೂ ಲೋಪಗಳಾಗಿವೆ.ಇದರಲ್ಲಿ ಮೃತಪಟ್ಟವರ, ಸದಸ್ಯತ್ವ ಮರಳಿಸಿ ಹೋದವರನ್ನು ಉಳಿಸಿಕೊಂಡು ಚುನಾವಣೆ ಮಾಡಲಾಗಿದೆ. ಮತದಾರರ ಪಟ್ಟಿಯನ್ನು ಕೆಎಂಸಿ ವೆಬ್ಸೈಟ್ನಲ್ಲಿ ಪ್ರಕಟಿಸದೆ, ಪ್ರತ್ಯೇಕವಾಗಿ ಪ್ರಕಟಿಸಲಾಗಿದೆ. ಈ ಸಂಬಂಧ ಸಲ್ಲಿಸಲಾಗಿದ್ದ ಆಕ್ಷೇಪಣೆಯನ್ನು ಚುನಾವಣಾಧಿಕಾರಿಗಳು ಪರಿಗಣನೆಗೆ ತೆಗೆದುಕೊಂಡಿರಲಿಲ್ಲ ಎಂದು ಅರ್ಜಿದಾರರು ತಿಳಿಸಿದ್ದರು.
ಈ ಎಲ್ಲ ಅಂಶಗಳನ್ನು ಪರಿಗಣಿಸಿರುವ ಕೋರ್ಟ್, ಹೊಸ ಮತದಾರರ ಪಟ್ಟಿಯೊಂದಿಗೆ ಮರು ಚುನಾವಣೆ ನಡೆಸಲು ಆದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.