ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಸಾರ್ವಜನಿಕ ಸಂಪರ್ಕ ಸಾರಿಗೆ ಸ್ಥಗಿತವಾಗಿದೆ. ಈ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅನಾನುಕೂಲವಾಗಿರುವ ಕಾರಣದಿಂದ ಶಿಕ್ಷಕರಿಗೆ ಜೂ. 21 ರ ವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗಿರುವ 11 ಜಿಲ್ಲೆಗಳನ್ನು ಹೊರತುಪಡಿಸಿ, ಉಳಿದ ಜಿಲ್ಲೆಗಳಲ್ಲಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಿತ್ತು. ಈ ಹಿನ್ನೆಯಲ್ಲಿ ಶಿಕ್ಷಕರು ಶಾಲೆಗಳಿಗೆ ತೆರಳಿ ಕೆಲಸ ನಿರ್ವಹಿಸುವಂತೆ ಈ ಹಿಂದೆ ಶಿಕ್ಷಣ ಇಲಾಖೆ ಆದೇಶಿಸಿತ್ತು. ಆದರೆ ಸಂಚಾರಕ್ಕೆ ಪೂರಕ ಅನುಕೂಲಗಳಿಲ್ಲದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಜೂ. 21 ರ ಬಳಿಕ ರಾಜ್ಯದಲ್ಲಿ ಸಾರಿಗೆ ಬಸ್ಸುಗಳು ರಸ್ತೆಗಿಳಿಯುವ ಸಾಧ್ಯತೆ ಇದೆ. ಆ ಬಳಿಕ ಶಿಕ್ಷಕರು ಶಾಲೆಗಳಿಗೆ ನೇರವಾಗಿ ಹಾಜರಾಗುವ ಮೂಲಕ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ. ಶಾಲೆಗಳಿಗೆ ಶಿಕ್ಷಕರ ಹಾಜರಾತಿಗೆ ಸಂಬಂಧಿಸಿದಂತೆ ದಿ. 14 ಜೂನ್ 2021 ರಂದು ಹೊರಡಿಸಲಾದ ಆದೇಶಕ್ಕೆ ಸದ್ಯ ತನ್ನ ತಿದ್ದುಪಡಿ ತರಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.