ನವದೆಹಲಿ: ಭಾರತದ ಎಥೆನಾಲ್ ಹೊಂದುವ ಸಾಮರ್ಥ್ಯವು 2025 ರ ವೇಳೆಗೆ ದ್ವಿಗುಣಗೊಳ್ಳುವ ಸಾಧ್ಯತೆ ಇದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ (ಡಿಎಫ್ಪಿಡಿ) ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ.
ಪೆಟ್ರೋಲ್ನೊಂದಿಗೆ ಎಥೆನಾಲ್ ಅನ್ನು ಮಿಶ್ರಣ ಮಾಡುವುದರಿಂದ ದೇಶದ ಆರ್ಥಿಕತೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಅಧಿಕೃತವಾಗಿ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿಯ ಪ್ರಕಾರ, ಇಂತಹ ಕ್ರಮವು ಸ್ಥಳೀಯ ಇಂಧನವಾಗಿ ಎಥೆನಾಲ್ ಬಳಕೆಯನ್ನು ಉತ್ತೇಜಿಸುತ್ತದೆ, ಮಾಲಿನ್ಯರಹಿತವಾಗಿರುತ್ತದೆ. ಇದಲ್ಲದೆ, ಇ20 ಇಂಧನದ ಬಳಕೆಯು ಇಂಗಾಲದ ಮಾನಾಕ್ಸೈಡ್ ಮತ್ತು ಹೈಡ್ರೋಕಾರ್ಬನ್ ಹೊರಸೂಸುವಿಕೆಯನ್ನು ಕ್ರಮವಾಗಿ ಶೇ 30-50 ಮತ್ತು ಶೇ 20 ರಷ್ಟು ಕಡಿತಗೊಳಿಸುತ್ತದೆ.
“ಬೇಡಿಕೆ ಮತ್ತು ಪೂರೈಕೆ ಸಮಸ್ಯೆಗಳನ್ನು ಪರಿಹರಿಸಲು ತೆಗೆದುಕೊಂಡ ವಿವಿಧ ಕ್ರಮಗಳ ಪರಿಣಾಮವಾಗಿ, 2025 ರ ವೇಳೆಗೆ ದೇಶದಲ್ಲಿ ಎಥೆನಾಲ್ ತಯಾರಿಸುವ ಸಾಮರ್ಥ್ಯವು ದ್ವಿಗುಣಗೊಳ್ಳುವ ಸಾಧ್ಯತೆಯಿದೆ ಮತ್ತು ಇದರಿಂದ ನಮಗೆ ಶೇ.20 ರಷ್ಟು ಮಿಶ್ರಣ ಮಾಡುವ ಗುರಿಯನ್ನು ಸಾಧಿಸಲು ಸಾಧ್ಯವಾಗುತ್ತದೆ” ಎಂದು ಪಾಂಡೆ ಹೇಳಿದ್ದಾರೆ.
ಇದಲ್ಲದೆ, ಸಕ್ಕರೆ ಕಾರ್ಖಾನೆಗಳು ಮತ್ತು ಡಿಸ್ಟಿಲರಿಗಳಿಗೆ ತಮ್ಮ ಎಥೆನಾಲ್ ಡಿಸ್ಟಿಲ್ಲೇಶನ್ ಸಾಮರ್ಥ್ಯವನ್ನು ವಿಸ್ತರಿಸಲು ಸರ್ಕಾರ ಪ್ರೋತ್ಸಾಹಿಸುತ್ತಿದೆ. ಬಡ್ಡಿ ಸಬ್ವೆನ್ಷನ್ ಅನ್ನು ಸರ್ಕಾರವೇ ಭರಿಸು ಬ್ಯಾಂಕ್ ಸಾಲಗಳನ್ನು ಈ ಉದ್ದೇಶಕ್ಕಾಗಿ ಘಟಕಗಳಿಗೆ ವಿಸ್ತರಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.