ವಿಶಾಖಪಟ್ಟಣಂ: ಆಂಧ್ರಪ್ರದೇಶ ಪೊಲೀಸರು ಬುಧವಾರ ಮುಂಜಾನೆ ನಡೆಸಿದ ಎನ್ಕೌಂಟರ್ನಲ್ಲಿ ಮಹಿಳೆಯರು ಸೇರಿದಂತೆ ಆರು ನಕ್ಸಲರು ಸಾವನ್ನಪ್ಪಿದ್ದಾರೆ.
ವಿಶಾಖಪಟ್ಟಣಂ ಜಿಲ್ಲೆಯ ಥೀಗಲಮೇಟ್ಟ ಅರಣ್ಯ ಪ್ರದೇಶದಲ್ಲಿ ಸಿಪಿಐ (ಮಾವೋವಾದಿ) ಮತ್ತು ಗ್ರೇಹೌಂಡ್ಸ್ ಪೊಲೀಸ್ ಪಡೆಗಳ ನಡುವೆ ಬಳನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ಬಲಿಯಾಗಿದ್ದಾರೆ ಎಂದು ವಿಶಾಖಾ ಗ್ರಾಮೀಣ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೃಷ್ಣ ರಾವ್ ಅವರು ಮಾಹಿತಿ ನೀಡಿದ್ದಾರೆ.
“ಇಂದು ಬೆಳಿಗ್ಗೆ, ಸಿಪಿಐ (ಮಾವೋವಾದಿ) ಮತ್ತು ಗ್ರೇಹೌಂಡ್ಸ್ ಪೊಲೀಸ್ ಪಡೆಗಳ ನಡುವೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಮಾಂಪಾದ ಪಿಎಸ್ ವ್ಯಾಪ್ತಿಯಲ್ಲಿರುವ ಥೀಗಲಮೆಟ್ಟ ಅರಣ್ಯ ಪ್ರದೇಶಗಳಲ್ಲಿ (ಕೊಯಿರು ಸುತ್ತಮುತ್ತಲಿನ ಪ್ರದೇಶಗಳು) ಗುಂಡಿನ ಚಕಮಕಿ ಸಂಭವಿಸಿದೆ” ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
“ಆರು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಂದು ಎಕೆ, ಒಂದು ಎಸ್ಎಲ್ಆರ್, ಒಂದು ಕಾರ್ಬೈನ್, ಮೂರು 303 ರೈಫಲ್ಸ್ ಅನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ” ಎಂದು ಅದು ಹೇಳಿದೆ.
ಪೊಲೀಸ್ ಸಿಬ್ಬಂದಿಗೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.