ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)ವು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ವಿವಿಧ ಹಂತಗಳನ್ನು ಡ್ರೋನ್ ಮೂಲಕ ಸಮೀಕ್ಷೆ ನಡೆಸುವುದನ್ನು ಕಡ್ಡಾಯಗೊಳಿಸಿದೆ.
ನಿರ್ಮಾಣ, ಕಾರ್ಯಾಚರಣೆ ಮತ್ತು ನಿರ್ವಹಣೆ ಹೀಗೆ ಎಲ್ಲಾ ಹಂತಗಳಲ್ಲಿ ಡ್ರೋನ್ ವಿಡಿಯೋ ರೆಕಾರ್ಡಿಂಗ್ ಕಡ್ಡಾಯವಾಗಿದೆ. ಇತ್ತೀಚಿನ ತಂತ್ರಜ್ಞಾನವನ್ನು ಪಾರದರ್ಶಕತೆ, ಏಕರೂಪತೆ ಮತ್ತು ನಿಯಂತ್ರಣ ಹೆಚ್ಚಿಸಲು ಬಳಸಿಕೊಳ್ಳುವುದು ಇದರ ಉದ್ದೇಶ.
ಇದರ ಅಡಿಯಲ್ಲಿ, ಗುತ್ತಿಗೆದಾರರು ಮೇಲ್ವಿಚಾರಣಾ ಸಲಹೆಗಾರ ತಂಡದ ನಾಯಕನ ಸಮ್ಮುಖದಲ್ಲಿ ಡ್ರೋನ್ ವಿಡಿಯೋ ರೆಕಾರ್ಡಿಂಗ್ ಅನ್ನು ನಿರ್ವಹಿಸಬೇಕು ಮತ್ತು ಪ್ರಸ್ತುತ ಮತ್ತು ಕಳೆದ ತಿಂಗಳ ತುಲನಾತ್ಮಕ ಪ್ರಾಜೆಕ್ಟ್ ವೀಡಿಯೊಗಳನ್ನು ಎನ್ಎಚ್ಎಐನ ಪೋರ್ಟಲ್ ‘ಡಾಟಾ ಲೇಕ್’ ನಲ್ಲಿ ಅಪ್ಲೋಡ್ ಮಾಡಬೇಕು, ಈ ಸಮಯದಲ್ಲಿ ಯೋಜನೆಗೆ ಸಂಬಂಧಿಸಿದ ವಿವಿಧ ಬೆಳವಣಿಗೆಗಳನ್ನು ಸೆರೆಹಿಡಿಯಬೇಕು ಎಂದು ಸೂಚಿಸಲಾಗಿದೆ.
“ಮೇಲ್ವಿಚಾರಣಾ ಸಲಹೆಗಾರರು ಈ ವೀಡಿಯೊಗಳನ್ನು ವಿಶ್ಲೇಷಿಸುತ್ತಾರೆ ಮತ್ತು ಯೋಜನೆಯ ಅಭಿವೃದ್ಧಿಯ ವಿವಿಧ ಅಂಶಗಳನ್ನು ಒಳಗೊಂಡ ಡಿಜಿಟಲ್ ಮಾಸಿಕ ಪ್ರಗತಿ ವರದಿಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ನೀಡುತ್ತಾರೆ. ಈ ಅವಲೋಕನಗಳನ್ನು ಯೋಜನೆಗಳ ಭೌತಿಕ ತಪಾಸಣೆಯ ಸಮಯದಲ್ಲಿ ಎನ್ಎಚ್ಎಐ ಅಧಿಕಾರಿಗಳು ಹಿಂದಿನ ಅವಲೋಕನಗಳಲ್ಲಿನ ವ್ಯತ್ಯಾಸಗಳು ಮತ್ತು ತಿದ್ದುಪಡಿಗಳನ್ನು ಪರಿಶೀಲಿಸಲು ಬಳಸುತ್ತಾರೆ ”ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.