ನವದೆಹಲಿ: ಅಂತರರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ವಿಶ್ವಾದ್ಯಂತ ಆಚರಿಸಲಾಗುತ್ತಿದೆ. ಈ ವರ್ಷ ʼಯೋಗಕ್ಷೇಮಕ್ಕಾಗಿ ಯೋಗʼ ಎಂಬ ವಿಷಯದೊಂದಿಗೆ ಯೋಗ ದಿನವನ್ನು ಆಚರಣೆ ಮಾಡಲಾಗುತ್ತಿದೆ.
ಕೋವಿಡ್ ಸಾಂಕ್ರಾಮಿಕವು ಪ್ರಪಂಚದಾದ್ಯಂತದ ಜನರ ಜೀವನ ಮತ್ತು ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಸಂದರ್ಭದಲ್ಲಿ ಜನರ ಸಮಗ್ರ ಆರೋಗ್ಯವನ್ನು ಉತ್ತೇಜಿಸುವಲ್ಲಿ ಯೋಗದ ಮಹತ್ವವು ಬಹಳ ಪ್ರಸ್ತುತವಾಗಿದೆ.
ಯೋಗವು ಕೇವಲ ದೈಹಿಕ ಚಟುವಟಿಕೆ ಮಾತ್ರವಲ್ಲ, ಇದು ಪ್ರಾಚೀನ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದ್ದು, ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ನಿಯಮಿತ ಅಭ್ಯಾಸವು ವ್ಯಕ್ತಿಯನ್ನು ಫ್ಲೆಕ್ಸಿಬಲ್ ಆಗಿ ಇಡುತ್ತದೆ, ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ, ಸ್ನಾಯುವಿನ ಶಕ್ತಿಯನ್ನು ಹೆಚ್ಚಿಸುತ್ತದೆ, ರಕ್ತದ ಹರಿವನ್ನು ಹೆಚ್ಚಿಸುತ್ತದೆ ಮತ್ತು ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಪ್ರಾಣಾಯಾಮದಂತಹ ಯೋಗದಲ್ಲಿ ಉಸಿರಾಟದ ವ್ಯಾಯಾಮವು ವ್ಯಕ್ತಿಯು ಒತ್ತಡ ಮತ್ತು ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಯೋಗವು ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ. ಯೋಗದ ನಿಯಮಿತ ಅಭ್ಯಾಸವು ಜನರಿಗೆ ಒತ್ತಡ ರಹಿತ, ಸಮತೋಲಿತ ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.ಯೋಗ ಸಮಯದ ಅವಶ್ಯಕತೆಯಾಗಿಯೂ ಹೊರಹೊಮ್ಮಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.