ಬೆಂಗಳೂರು: ತೋಟಗಾರಿಕೆ ಕ್ಷೇತ್ರದಲ್ಲಿ ಇಸ್ರೇಲಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು, ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಕರ್ನಾಟಕದಲ್ಲಿ ಸ್ಥಾಪಿಸಲಾದ 3 ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳನ್ನು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಜಂಟಿಯಾಗಿ ಉದ್ಘಾಟಿಸಿದರು.
ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಎಂ ಐ ಡಿ ಎಚ್ ವಿಭಾಗ ಮತ್ತು ಇಸ್ರೇಲ್ನ ಅಂತರರಾಷ್ಟ್ರೀಯ ಅಭಿವೃದ್ಧಿ ಸಹಕಾರ ಸಂಸ್ಥೆ – ಎಂ ಎ ಎಸ್ ಎಚ್ ಎ ವಿ ಇಸ್ರೇಲ್ನ ಅತಿದೊಡ್ಡ ಸರ್ಕಾರದಿಂದ ಸರ್ಕಾರದ (ಜಿ 2 ಜಿ) ಸಹಕಾರವನ್ನು ಮುನ್ನಡೆಸುತ್ತಿವೆ. ಭಾರತದಾದ್ಯಂತ 12 ರಾಜ್ಯಗಳಲ್ಲಿ 29 ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳೊಂದಿಗೆ ಸುಧಾರಿತ ಇಸ್ರೇಲಿ ಕೃಷಿ- ತಂತ್ರಜ್ಞಾನವನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಗುಣವಾಗಿ ಅಳವಡಿಸಿ ಅನುಷ್ಠಾನಗೊಳಿಸುತ್ತಿವೆ.
ಈ 29 ಸಂಪೂರ್ಣ ಕಾರ್ಯಾಚರಣೆಯಲ್ಲಿರುವ ಸಿಒಇಗಳಲ್ಲಿ 3 ಕರ್ನಾಟಕದಲ್ಲಿವೆ. ಮಾವು ಬೆಳೆಗೆ ಸಂಬಂಧಿಸಿದಂತೆ ಕೋಲಾರದಲ್ಲಿ, ದಾಳಿಂಬೆಗಾಗಿ ಬಾಗಲಕೋಟೆಯಲ್ಲಿ ಮತ್ತು ತರಕಾರಿಗಳಿಗೆ ಧಾರವಾಡದಲ್ಲಿ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಉತ್ಕೃಷ್ಟತಾ ಕೇಂದ್ರಗಳು ಜ್ಞಾನವನ್ನು ಉತ್ಪಾದಿಸುತ್ತವೆ, ಉತ್ತಮ ಅಭ್ಯಾಸಗಳನ್ನು ಪ್ರದರ್ಶಿಸುತ್ತವೆ ಮತ್ತು ಅಧಿಕಾರಿಗಳು ಮತ್ತು ರೈತರಿಗೆ ತರಬೇತಿ ನೀಡುತ್ತವೆ.
ನವೀನ ತಂತ್ರಜ್ಞಾನಗಳನ್ನು ವರ್ಗಾಯಿಸಲು, ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ತೋಟಗಾರಿಕೆ ಉತ್ಪನ್ನಗಳ ಉತ್ಪಾದನೆ, ಉತ್ಪಾದಕತೆ ಮತ್ತು ಗುಣಮಟ್ಟವನ್ನು ಸುಧಾರಿಸಲು ಹಾಗೂ ಸುಸ್ಥಿರತೆ ಸಾಧಿಸಲು ಕರ್ನಾಟಕದಲ್ಲಿ ಭಾರತ-ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಈ ಉತ್ಕೃಷ್ಟತಾ ಕೇಂದ್ರ (ಸಿಒಇ) ಗಳನ್ನು ಸ್ಥಾಪಿಸಲು ಆರ್ಥಿಕ ಮತ್ತು ತಾಂತ್ರಿಕ ನೆರವು ನೀಡಿದ ಭಾರತ ಸರ್ಕಾರ ಮತ್ತು ಇಸ್ರೇಲ್ ದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧನ್ಯವಾದ ತಿಳಿಸಿದರು.
ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್, “ಈ ಕೇಂದ್ರಗಳು ಕರ್ನಾಟಕದ ಕೃಷಿಕ ಸಮುದಾಯಕ್ಕೆ ಇತ್ತೀಚಿನ ಇಸ್ರೇಲಿ ತಂತ್ರಜ್ಞಾನಗಳು ಲಭ್ಯವಾಗಲು ಸಹಾಯ ಮಾಡುತ್ತವೆ ಮತ್ತು ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ರೈತರ ಆದಾಯವನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ” ಎಂದರು. ಈ ಸಿಒಇಗಳು ವಾರ್ಷಿಕವಾಗಿ 50,000 ಕಸಿ ಉತ್ಪಾದನೆ ಮತ್ತು 25 ಲಕ್ಷ ತರಕಾರಿ ಸಸಿಗಳ ಉತ್ಪಾದನೆಯ ಸಾಮರ್ಥ್ಯವನ್ನು ಹೊಂದಿವೆ. ತೋಟಗಾರಿಕೆಯಲ್ಲಿ ಆಧುನಿಕ ಕೃಷಿ ಪದ್ಧತಿಗಳ ಬಗ್ಗೆ ಜ್ಞಾನ ಪಡೆಯಲು ಸುಮಾರು 20,000 ರೈತರು ಈ ಸಿಒಇಗಳಿಗೆ ಭೇಟಿ ನೀಡಿದ್ದಾರೆ ಎಂದು ಅವರು ತಿಳಿಸಿದರು.
ಕರ್ನಾಟಕದ ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಆರ್. ಶಂಕರ್ ಮಾತನಾಡಿ, “ಕರ್ನಾಟಕದಲ್ಲಿ ತೋಟಗಾರಿಕೆ ಉತ್ಪನ್ನಗಳ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಬೆಳೆ ಉತ್ಪಾದನೆ ಮತ್ತು ಕೊಯ್ಲಿನ ನಂತರದ ನಿರ್ವಹಣೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಇತ್ತೀಚಿನ ತಂತ್ರಜ್ಞಾನಗಳನ್ನು ರೈತರಿಗೆ ಒದಗಿಸಲು, ಭಾರತ ಸರ್ಕಾರವು ಇಸ್ರೇಲ್ ಸಹಯೋಗದೊಂದಿಗೆ ಕೋಲಾರದಲ್ಲಿ ಮಾವಿನ ಉತ್ಕೃಷ್ಟ ಕೇಂದ್ರ, ಬಾಗಲಕೋಟೆಯಲ್ಲಿ ದಾಳಿಂಬೆ ಮತ್ತು ಧಾರವಾಡದಲ್ಲಿ ತರಕಾರಿಗಳ ಉತ್ಕೃಷ್ಟ ಕೇಂದ್ರಗಳನ್ನು ಇಂಡೋ ಇಸ್ರೇಲ್ ಕೃಷಿ ಯೋಜನೆ (ಐಐಎಪಿ) ಅಡಿಯಲ್ಲಿ ಸ್ಥಾಪಿಸಲು ಸಹಾಯ ಮಾಡಿದೆ. ಈ ಕೇಂದ್ರಗಳು ಅಭಿವೃದ್ಧಿಪಡಿಸಿದ ನವೀನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಕರ್ನಾಟಕ ರೈತರು ಬಹಳ ಪ್ರಗತಿಪರರಾಗಿದ್ದಾರೆ. ಈ ಕೇಂದ್ರಗಳು ಉತ್ಪಾದನೆಯಲ್ಲಿ ಹೆಚ್ಚಳ, ಉತ್ಪಾದಕತೆಯ ವೆಚ್ಚವನ್ನು ಕಡಿಮೆ ಮಾಡುವುದರ ಮೂಲಕ ರೈತರ ಆದಾಯವನ್ನು ಹೆಚ್ಚಿಸುತ್ತವೆ ” ಎಂದರು.
ಭಾರತದಲ್ಲಿನ ಇಸ್ರೇಲ್ ರಾಯಭಾರಿ ಡಾ. ರಾನ್ ಮಲ್ಕಾ ಅವರು ಮಾತನಾಡಿ, “ಇಂಡೋ-ಇಸ್ರೇಲಿ ಸಹಭಾಗಿತ್ವದ ಮಹತ್ವದ ಭಾಗವಾಗಿರುವ ಕೃಷಿಯಲ್ಲಿ ಕರ್ನಾಟಕ ಸರ್ಕಾರದೊಂದಿಗೆ ಸಹಯೋಗ ಹೊಂದಲು ನಾವು ಹೆಮ್ಮೆ ಪಡುತ್ತೇವೆ ಮತ್ತು ಉತ್ಸುಕರಾಗಿದ್ದೇವೆ. ನಮ್ಮ ದೇಶಗಳ ನಡುವಿನ ಸಂಬಂಧಗಳು ಬಲಗೊಳ್ಳುತ್ತಿರುವ ಮತ್ತು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ನಾವು ಮೂರು ವಿಭಿನ್ನ ಕೇಂದ್ರಗಳನ್ನು ಉದ್ಘಾಟಿಸಿದ್ದೇವೆ. ಇದು ರಾಜ್ಯದ ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಒಂದು ಮೈಲಿಗಲ್ಲಾಗಿದ್ದು, ಸ್ಥಳೀಯ ರೈತರಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧೆಯ ಅವಕಾಶವನ್ನು ನೀಡುತ್ತದೆ. ಗೌರವಾನ್ವಿತ ಪ್ರಧಾನಿ ಮೋದಿಯವರ ದೂರದೃಷ್ಟಿಗೆ ಅನುಗುಣವಾಗಿ ರೈತರ ಆದಾಯವನ್ನು ದ್ವಿಗುಣಗೊಳಿಸಲು ಇದು ಸಹಕಾರಿಯಾಗುತ್ತದೆ” ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.