ಬೆಂಗಳೂರು: ಕೊರೋನಾ ಸಂಕಷ್ಟದ ಅವಧಿಯಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯನ್ನು ಹೆಚ್ಚು ಉಪಯೋಗಿಸಿದ ರಾಜ್ಯಗಳ ಪೈಕಿ ಕರ್ನಾಟಕ ನಂ. 1 ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳು ಸ್ಥಾನ ಪಡೆದಿವೆ.
ಕರ್ನಾಟಕದಲ್ಲಿ 1,62,050 ಜನರು ಆಯುಷ್ಮಾನ್ ಭಾರತ್ ಯೋಜನೆಯಡಿ ಕೊರೋನಾ ಸೋಂಕಿಗೆ ಚಿಕಿತ್ಸೆ ಪಡೆದಿದ್ದಾರೆ. ಮಹಾರಾಷ್ಟ್ರದಲ್ಲಿ 1,61,234 ಮತ್ತು ಆಂಧ್ರಪ್ರದೇಶದಲ್ಲಿ 1,54,760 ಮಂದಿ ಆಯುಷ್ಮಾನ್ ಅಡಿಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಈ ಯೋಜನೆಯನ್ನು 2018 ರಲ್ಲಿ ಆರಂಭಿಸಲಾಗಿದ್ದು, ಈವರೆಗೆ ಸುಮಾರು 50 ಕೋಟಿಗೂ ಅಧಿಕ ಜನರು ಈ ಮೂಲಕ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಪಡೆದಿದ್ದಾರೆ. ಈ ಯೋಜನೆಯಡಿಯಲ್ಲಿ ಕುಟುಂಬದ ಸದಸ್ಯನೋರ್ವ 5 ಲಕ್ಷ ರೂ. ಗಳ ವರೆಗೆ ಉಚಿತ ವೈದ್ಯಕೀಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಈ ಯೋಜನೆ ಕೊರೋನಾ ಸಂದರ್ಭದಲ್ಲಿ ಸಾಕಷ್ಟು ಜನರ ಜೀವ ಉಳಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.
ದೇಶದಾದ್ಯಂತ ಆಯುಷ್ಮಾನ್ ಭಾರತ್ ಯೋಜನೆಯಡಿ 2021 ರ ಜೂನ್ ಮೊದಲ ವಾರಾಂತ್ಯದವರೆಗೆ ಒಟ್ಟು 23.78 ಲಕ್ಷ ಜನರು ಪ್ರಯೋಜನ ಪಡೆದಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಕಾಲದಲ್ಲಿ ಬಡಜನರ ಪಾಲಿನ ಸಂಜೀವಿನಿಯಾಗಿದೆ ಆಯುಷ್ಮಾನ್ ಭಾರತ್ ಯೋಜನೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.