ನವದೆಹಲಿ: ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ಅಡ್ವಾನ್ಸ್ಡ್ ಟೋವ್ಡ್ ಆರ್ಟಿಲರಿ ಗನ್ (ಎಟಿಎಜಿ) ನ ನಿರ್ಣಾಯಕ ಪ್ರಯೋಗಗಳು ಆರಂಭಗೊಂಡಿದೆ. ಭಾರತೀಯ ಸೇನೆಯ ಅವಶ್ಯಕತೆಗಳಿಗೆ ಅನುಗುಣವಾಗಿ ಅದರ ಸುರಕ್ಷತೆ ಮತ್ತು ಕಾರ್ಯಕ್ಷಮತೆಯ ಮಾನದಂಡಗಳನ್ನು ಪರೀಕ್ಷಿಸುವ ಸಲುವಾಗಿ ಈ ವಾರ ಪ್ರಯೋಗಗಳನ್ನು ಆರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ವಿವಿಧ ಭೂಪ್ರದೇಶಗಳು ಮತ್ತು ವಿಧಾನಗಳಲ್ಲಿ ಗುಂಡಿನ ದಾಳಿ ಸೇರಿದಂತೆ ಅನೇಕ ರೀತಿಯ ಪ್ರಯೋಗಗಳನ್ನು ನಡೆಸಿ ಇದರ ಸಂಪೂರ್ಣ ವಿಮರ್ಶೆಯನ್ನು ಮಾಡಲಾಗುತ್ತಿದೆ ಎನ್ನಲಾಗಿದೆ.
ಪರೀಕ್ಷಾ ಪ್ರಯೋಗಗಳು ಸುಮಾರು ಮೂರು ವಾರಗಳವರೆಗೆ ನಡೆಯಲಿದ್ದು, ಅದರ ನಂತರ ಸಶಸ್ತ್ರ ಪಡೆಗಳು ಈ ಬಂದೂಕುಗಳನ್ನು ಕ್ಷೇತ್ರ ಮೌಲ್ಯಮಾಪನ ಪರೀಕ್ಷೆಗಳಿಗೆ ಒಳಪಡಿಸಲು ಹೆಚ್ಚಿನ ಎತ್ತರದಲ್ಲಿ ನಿಯೋಜಿಸಲಿವೆ ಎಂದು ವರದಿಗಳು ತಿಳಿಸಿವೆ.
ಸ್ಕೂಲ್ ಆಫ್ ಆರ್ಟಿಲರಿಯ ಟ್ರಯಲ್ಸ್ ವಿಂಗ್ ಪರೀಕ್ಷೆಗಳನ್ನು ನಡೆಸುತ್ತಿದೆ, ಇದರ ಬಗ್ಗೆ ಸಮಗ್ರ ವರದಿಯನ್ನು ಸೇನಾ ತರಬೇತಿ ಕಮಾಂಡ್ಗೆ ಕಳುಹಿಸಲಾಗುವುದು ಮತ್ತು ಮುಂದಿನ ಕ್ರಮಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.