ಬೆಂಗಳೂರು: ಪ್ರಮುಖ ಬೆಳವಣಿಗೆಯಲ್ಲಿ ಸರ್ಕಾರ ರಚನೆ ಮಾಡಿರುವ ಸಮಿತಿಯ ಸಮಗ್ರ ನಿರ್ಧಾರ ಬಾರದೆ ಈ ಬಾರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಮರುಪರೀಕ್ಷೆಗೆ ಕುಳಿತುಕೊಳ್ಳುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಕೋರ್ಟ್ ಈ ಆದೇಶ ಹೊರಡಿಸಿದೆ. ಖಾಸಗಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ, ರಿಪೀಟರ್ಸ್ಗಳ ಪ್ರಥಮ ಪಿಯುಸಿ ಫಲಿತಾಂಶಗಳನ್ನು ಗಣನೆಗೆ ತೆಗೆದುಕೊಂಡು ಫ್ರೆಶರ್ಗಳು ಮತ್ತು ರಿಪೀಟರ್ಸ್ಗಳನ್ನು ಒಂದೇ ಪಟ್ಟಿಯಲ್ಲಿ ಹಾಕುವಂತೆಯೂ ಕೋರ್ಟ್ ಮೌಖಿಕವಾಗಿ ಸರ್ಕಾರಕ್ಕೆ ತಿಳಿಸಿದೆ. ಕೊರೋನಾ ಮುಗಿದ ಬಳಿಕ ಖಾಸಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಬಹುದು ಎಂದು ಸರ್ಕಾರ ತಿಳಿಸಿದೆ.
ಈ ಸಂಬಂಧ ಸಮಸ್ಯೆಗಳ ಬಗ್ಗೆ ಶಿಫಾರಸು ಸಲ್ಲಿಸಲು ಸರ್ಕಾರ 12 ಮಂದಿ ತಜ್ಞರ ಸಮಿತಿ ರಚಿಸಿದೆ. ಅವರು ವರದಿ ನೀಡುವ ವರೆಗೆ ಫಲಿತಾಂಶ ಮುಂದೂಡಬಹುದು ಎಂದು ವಕೀಲರು ತಿಳಿಸಿದ್ದಾರೆ. ಎಲ್ಲಾ ವರ್ಗಗಳ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.