ನವದೆಹಲಿ: ಸುರಕ್ಷಿತ ಮತ್ತು ಭದ್ರ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯನ್ನು ರಚಿಸುವ ಸಲುವಾಗಿ ಕೇಂದ್ರ ಗೃಹ ಸಚಿವಾಲಯವು ರಾಷ್ಟ್ರೀಯ ಸಹಾಯವಾಣಿ 155260 ಮತ್ತು ಸೈಬರ್ ವಂಚನೆಯಿಂದಾಗಿ ಆರ್ಥಿಕ ನಷ್ಟವನ್ನು ತಡೆಗಟ್ಟಲು ವರದಿ ಮಾಡುವ ವೇದಿಕೆ (Reporting Platform) ಅನ್ನು ಕಾರ್ಯರೂಪಕ್ಕೆ ತಂದಿದೆ.
ಸೈಬರ್ ವಂಚನೆಯಿಂದಾಗಿ ಮೋಸ ಹೋಗಿ ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಳ್ಳುವ ವ್ಯಕ್ತಿಗಳಿಗೆ ಸಹಾಯ ಮಾಡಲು, ಅವರು ವಂಚನೆ ಪ್ರಕರಣಗಳನ್ನು ವರದಿ ಮಾಡಲು ಈ ವೇದಿಕೆ ಒಂದು ವ್ಯವಸ್ಥೆಯನ್ನು ಒದಗಿಸುತ್ತದೆ.
ಈ ವರ್ಷದ ಏಪ್ರಿಲ್ 1 ನಲ್ಲಿ ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ಇದೀಗ ಸಹಾಯವಾಣಿ 155260 ಮತ್ತು ವರದಿ ಮಾಡುವ ವೇದಿಕೆಯನ್ನು ಗೃಹ ಸಚಿವಾಲಯದ ಅಡಿಯಲ್ಲಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರವು (ಐ 4 ಸಿ) ದೇಶವ್ಯಾಪಿಯಾಗಿ ಕಾರ್ಯರೂಪಕ್ಕೆ ತರುತ್ತಿದ್ದು, ಇದು ಭಾರತೀಯ ರಿಸರ್ವ್ ಬ್ಯಾಂಕ್, ಎಲ್ಲಾ ಪ್ರಮುಖ ಬ್ಯಾಂಕುಗಳು, ಪಾವತಿ ಬ್ಯಾಂಕುಗಳು, ಪೇಮೆಂಟ್ ಬ್ಯಾಂಕ್, ವ್ಯಾಲೆಟ್ಗಳ ಸಹಕಾರವನ್ನು ಹೊಂದಿದೆ.
“ಆರಂಭದ ನಂತರ, ಎರಡು ತಿಂಗಳ ಅಲ್ಪಾವಧಿಯಲ್ಲಿ, ಹೆಲ್ಪ್ಲೈನ್ 155260 ವಂಚಕರ ಕೈಗೆ ತಲುಪದಂತೆ 1.85 ಕೋಟಿ ರೂ.ಗಿಂತಲೂ ಹೆಚ್ಚಿನ ಹಣವನ್ನು ಉಳಿಸಿದೆ” ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.