ಬೆಂಗಳೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಉಚಿತವಾಗಿ ನೀಡುವ ನಿಟ್ಟಿನಲ್ಲಿ ನಿರ್ಣಯ ಕೈಗೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಕೊರೋನಾ ನಿರ್ವಹಣೆ, ಚಿಕಿತ್ಸೆಗೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿರುವ ವಿಭಾಗೀಯ ಪೀಠ ಈ ಆದೇಶವನ್ನು ನೀಡಿದೆ.
ರಾಜ್ಯದಲ್ಲಿ ಈವರೆಗೆ ಒಟ್ಟು 2,817 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆ ಸಹ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಹ ಮೀಸಲಿಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿದೆ.
ಜೊತೆಗೆ ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಕ್ರಮ ಕೈಗೊಳ್ಳಬೇಕು. ಕೊರೋನಾ ಪಾಸಿಟಿವಿಟಿ ವಿರುದ್ಧ ಅಗತ್ಯ ಜಾಗೃತಿ ಮೂಡಿಸಬೇಕು. ಈ ಸಂಬಂಧ ಸರ್ಕಾರ ತೆಗೆದುಕೊಂಡ ಕ್ರಮಗಳಿಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯ ಸಂದರ್ಭದಲ್ಲಿ ಹೈಕೋರ್ಟ್ಗೆ ಮಾಹಿತಿಯನ್ನು ನೀಡುವಂತೆಯೂ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.