ನವದೆಹಲಿ: ಭಾರತೀಯ ರೈಲ್ವೆ ದೇಶಾದ್ಯಂತ ವಿವಿಧ ರಾಜ್ಯಗಳಿಗೆ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್ಎಂಒ) ತಲುಪಿಸುವ ಮೂಲಕ ನಿರಾಳತೆಯನ್ನು ಒದಗಿಸುವ ಪ್ರಯಾಣವನ್ನು ಮುಂದುವರಿಸಿದೆ.
ಆಕ್ಸಿಜನ್ ಎಕ್ಸ್ಪ್ರೆಸ್ಗಳು ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದನ್ನು ಮುಂದುವರೆಸಿದ್ದು, 32000 ಮೆ.ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್ಎಂಒ) ವಿತರಣೆಯ ಮೈಲಿಗಲ್ಲನ್ನು ಸಾಧಿಸಿದೆ.
ಇಲ್ಲಿಯವರೆಗೆ, ಭಾರತೀಯ ರೈಲ್ವೆ 1830 ಕ್ಕೂ ಹೆಚ್ಚು ಟ್ಯಾಂಕರ್ಗಳಲ್ಲಿ ಸುಮಾರು 32017 ಮೆ.ಟನ್ ಆಮ್ಲಜನಕವನ್ನು ದೇಶದ ವಿವಿಧ ರಾಜ್ಯಗಳಿಗೆ ತಲುಪಿಸಿದೆ.
443 ಆಕ್ಸಿಜನ್ ಎಕ್ಸ್ಪ್ರೆಸ್ಗಳು ಈವರೆಗೆ ತಮ್ಮ ಪ್ರಯಾಣವನ್ನು ಪೂರ್ಣಗೊಳಿಸಿವೆ ಮತ್ತು ವಿವಿಧ ರಾಜ್ಯಗಳಿಗೆ ಪರಿಹಾರವನ್ನು ನೀಡಿವೆ ಎಂಬುದು ಗಮನಾರ್ಹ.
ಆಕ್ಸಿಜನ್ ಎಕ್ಸ್ಪ್ರೆಸ್ಗಳು ದೇಶದ ದಕ್ಷಿಣ ರಾಜ್ಯಗಳಿಗೆ 17600 ಮೆ.ಟನ್ ಗಿಂತ ಹೆಚ್ಚಿನ ದ್ರವ ವೈದ್ಯಕೀಯ ಆಮ್ಲಜನಕವನ್ನು (ಎಲ್ಎಂಒ) ವಿತರಿಸಿದೆ.
ಆಕ್ಸಿಜನ್ ಎಕ್ಸ್ಪ್ರೆಸ್ಗಳು ತಮಿಳುನಾಡಿನಲ್ಲಿ 5600 ಕ್ಕೂ ಹೆಚ್ಚು ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (ಎಲ್ಎಂಒ) ಅನ್ನು ಲೋಡ್ ಮಾಡಿವೆ.
ಆಕ್ಸಿಜನ್ ಎಕ್ಸ್ಪ್ರೆಸ್ಗಳು ಕ್ರಮವಾಗಿ ತೆಲಂಗಾಣ, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಲ್ಲಿ 3200, 4000 ಮತ್ತು 4100 ಮೆ.ಟನ್ ಆಮ್ಲಜನಕ ಪೂರೈಕೆ ಮಾಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.