ಬೆಂಗಳೂರು: ಪಕ್ಷದ ವಿರುದ್ಧ ಯಾರೂ ಮಾತನಾಡಬಾರದು. ಪಕ್ಷಕ್ಕೆ ನಷ್ಟ ಉಂಟಾಗುವ ರೀತಿಯಲ್ಲಿ ಎರಡರಿಂದ ಮೂರು ಜನರು ಕೆಲಸ ಮಾಡುತ್ತಿದ್ದಾರೆ. ಅಂಥ ಕೆಲವರ ವಿರುದ್ಧ ಪಕ್ಷವು ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿ, ಪಕ್ಷದ ವಿರುದ್ಧ ಮಾತನಾಡುವವರಿಗೆ ಹಾಗೆ ಮಾಡದಂತೆ ಸೂಚಿಸಲಾಗಿದೆ ಎಂದು ತಿಳಿಸಿದರು. ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷವಾಗಿದೆ. ಪಕ್ಷದ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡಬೇಕು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ವಿಫಲತೆಗಳ ಕುರಿತು ಮಾತನಾಡಬೇಕು ಎಂದರು.
ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಹಾಗೂ ಸಿಎಂ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಅವುಗಳ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ನಮ್ಮ ಪಕ್ಷದ ಮುಖಂಡರು ಮುಂದಾಗಬೇಕು ಎಂದು ಅವರು ಸೂಚಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.