ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಈ ಹಿಂದಿನ ಪದ್ಧತಿಯನ್ನೇ ಅನುಸರಿಸಲು ಪಿಯುಸಿ ಬೋರ್ಡ್ ಚಿಂತನೆ ನಡೆಸಿದ್ದು, ಪರೀಕ್ಷೆ ನಡೆಸದೆಯೇ ಗ್ರೇಡ್ ಬದಲು ಅಂಕಗಳನ್ನು ನೀಡಲು ನಿರ್ಧರಿಸಿದೆ.
ಕೊರೋನಾ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಈ ಸಂದರ್ಭದಲ್ಲಿ ಗ್ರೇಡ್ ರೂಪದಲ್ಲಿ ಫಲಿತಾಂಶ ನೀಡುವುದಾಗಿಯೂ ಬೋರ್ಡ್ ಹೇಳಿತ್ತು. ಆದರೆ ಇದೀಗ ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಬದಲಾವಣೆ ಮಾಡಲಾಗಿದ್ದು, ಗ್ರೇಡ್ ಬದಲು ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ.
ಗ್ರೇಡ್ ಮಾದರಿಯಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದರೆ ಅದರಿಂದ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಗ್ರೇಡ್ ಕ್ರಮವನ್ನು ಬದಲಾವಣೆ ಮಾಡಿ ಅಂಕಗಳ ರೂಪದಲ್ಲಿಯೇ ಫಲಿತಾಂಶ ಪ್ರಕಟಿಸುವುದಾಗಿ ಇಲಾಖೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.