ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಹುದ್ದೆಗಳಲ್ಲಿಯೂ 1% ಗಳಷ್ಟು ಉದ್ಯೋಗ ಮಂಗಳಮುಖಿಯರಿಗೆ ಮೀಸಲಿಡುವ ಸಂಬಂಧ ಕರಡು ಅಧಿಸೂಚನೆ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಹೈಕೋರ್ಟ್ಗೆ ಸಂಗಮ ಸ್ವಯಂಸೇವಾ ಸಂಸ್ಥೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕಾ, ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಸರ್ಕಾರ ಕೋರ್ಟ್ಗೆ ಈ ವಿಚಾರ ಸ್ಪಷ್ಟಪಡಿಸಿದೆ.
ಸರ್ಕಾರದ ಎಲ್ಲಾ ಹುದ್ದೆಗಳಲ್ಲಿಯೂ 1% ಹುದ್ದೆಗಳನ್ನು ಮಂಗಳಮುಖಿಯರಿಗೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ. ಅದರಂತೆ ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ 1977 ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ) ಯನ್ನು ಸೇರ್ಪಡೆ ಮಾಡಲಾಗುತ್ತದೆ. ಈ ಸಂಬಂಧ ಕರಡು ಅಧಿಸೂಚನೆ ಹೊರಡಿಸಿರುವುದಾಗಿ ಸರ್ಕಾರದ ಪರ ವಕೀಲ ವಿಜಯ ಕುಮಾರ್ ಪಾಟೀಲ್ ತಿಳಿಸಿದ್ದಾರೆ.
ಈ ಕರಡು ಅಧಿಸೂಚನೆಗೆ ಆಕ್ಷೇಪಣೆ ಸ್ವೀಕರಿಸಿದ ಬಳಿಕ ಅಂತಿಮಗೊಳಿಸಲಾಗುತ್ತದೆ. ಅದಕ್ಕಾಗಿ ಸ್ವಲ್ಪ ಸಮಯ ನೀಡುವಂತೆಯೂ ಹೈಕೋರ್ಟ್ಗೆ ಸರ್ಕಾರ ಮನವಿ ಮಾಡಿಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.