ನವದೆಹಲಿ: ಲಿಪೊಸೋಮಲ್ ಆಂಫೊಟೆರಿಸಿನ್-ಬಿ ಇಂಜೆಕ್ಷನ್ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಸರ್ಕಾರ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದ್ದಾರೆ.
ಕಪ್ಪು ಶಿಲೀಂಧ್ರ ಚಿಕಿತ್ಸೆಯಲ್ಲಿ ಬಳಸುವ ಲಿಪೊಸೋಮಲ್ ಆಂಫೊಟೆರಿಸಿನ್-ಬಿ ಯ ದೇಶೀಯ ಉತ್ಪಾದನೆಯು ಕೇವಲ ಮೂರು ತಿಂಗಳಲ್ಲಿ ಐದು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದಾರೆ.
ಈ ವರ್ಷದ ಏಪ್ರಿಲ್ನಲ್ಲಿ 62 ಸಾವಿರ ವಯಲ್ಗಳ ದೇಶೀಯ ಉತ್ಪಾದನಾ ಸಾಮರ್ಥ್ಯವನ್ನು ಭಾರತ ಹೊಂದಿತ್ತು, ಆದರೀಗ ದೇಶೀಯ ಉತ್ಪಾದನೆಯು ಈ ತಿಂಗಳಲ್ಲಿ 3.75 ಲಕ್ಷ ವಯಲ್ಗಳನ್ನು ದಾಟಲಿದೆ ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಒಂಬತ್ತು ಲಕ್ಷಕ್ಕೂ ಹೆಚ್ಚು ಲಿಪೊಸೋಮಲ್ ಆಂಫೊಟೆರಿಸಿನ್-ಬಿ ಚುಚ್ಚುಮದ್ದನ್ನು ಸರ್ಕಾರ ಆಮದು ಮಾಡಿಕೊಳ್ಳುತ್ತಿದೆ ಎಂದು ಮಾಂಡವಿಯಾ ಹೇಳಿದ್ದಾರೆ. 5.33 ಲಕ್ಷಕ್ಕೂ ಹೆಚ್ಚು ಚುಚ್ಚುಮದ್ದು ಭಾರತಕ್ಕೆ ತಲುಪಿದ್ದು, ಅವುಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.