ಬೆಂಗಳೂರು: ರಾಜ್ಯದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ರಾಜ್ಯ ಮಟ್ಟದ ಸಮಿತಿ ಹೊರಡಿಸುವ ಆದೇಶಗಳನ್ನು ಎಲ್ಲರೂ ಪಾಲನೆ ಮಾಡಬೇಕು. ದೇವಾಲಯಗಳನ್ನು ಮುಚ್ಚಬೇಕು ಎಂಬ ಆದೇಶದಲ್ಲಿಯೂ ಯಾರಿಗೂ ವಿನಾಯಿತಿ ನೀಡಬಾರದು. ಈ ಆದೇಶಗಳನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು ಎಂಬ ನಿರ್ದೇಶನವನ್ನು ಮುಜರಾಯಿ ಇಲಾಖೆಗೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಿಳಿಸಿದೆ.
ಸಾರ್ವಜನಿಕರಿಗೆ ದೇಗುಲಗಳಿಗೆ ಭೇಟಿ ನೀಡಲು ಅವಕಾಶ ಇಲ್ಲ ಎಂದಾದರೆ, ಯಾರಿಗೂ ಅವಕಾಶ ಇಲ್ಲ ಎಂದೇ ಅರ್ಥ. ಹೀಗಿರುವಾಗ ಪ್ರಭಾವಿಗಳು ಹೇಗೆ ಭೇಟಿ ನೀಡಲು ಸಾಧ್ಯ. ರಾಜಕಾರಣಿಗಳಿಗೆ ಇತರರಿಗಿಂತ ಹೊಣೆಗಾರಿಕೆ ಹೆಚ್ಚು. ಈ ಸಂಬಂಧ ಎಚ್ಚರ ವಹಿಸಬೇಕು ಎಂದು ಹೈಕೋರ್ಟ್ ಸರ್ಕಾರಕ್ಕೆ ಹೇಳಿದೆ.
ನಿಷೇಧವಿದ್ದರೂ ರಾಜಕಾರಣಿಗಳು ದೇಗುಲಗಳಿಗೆ ತೆರಳುವುದು ಕಂಡುಬರುತ್ತಿದೆ. ಸಾರ್ವಜನಿಕರಿರಲೀ, ಪ್ರಭಾವಿಗಳೇ ಇರಲಿ, ಅವರೆಲ್ಲರಿಗೂ ನೀತಿನಿಯಮಗಳು ಒಂದೇ ರೀತಿಯಲ್ಲಿ ಅನ್ವಯಿಸುತ್ತದೆ. ಈ ನಿಟ್ಟಿನಲ್ಲಿ ಮುಜರಾಯಿ ಇಲಾಖೆಗೆ ನಿಯಮ ಮೀರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸುವಂತೆ ಹೈಕೋರ್ಟ್ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.