ಬೆಂಗಳೂರು: ಇಂದಿನಿಂದ ತೊಡಗಿದಂತೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ಲಸಿಕೆಯನ್ನು ಹೆಚ್ಚು ಸಂಖ್ಯೆಯಲ್ಲಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆ ಇಂದು ರಾಜ್ಯಾದ್ಯಂತ ಲಸಿಕಾ ಮೇಳ ನಡೆಸುತ್ತಿದೆ.
ಈ ಲಸಿಕಾ ಮೇಳದಲ್ಲಿ ಒಂದೇ ದಿನ ಸುಮಾರು 11 ಲಕ್ಷ ಡೋಸ್ಗಳನ್ನು ವಿತರಣೆ ಮಾಡುವ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೂ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಹಾಗೆಯೇ ಲಸಿಕಾ ಮೇಳದಲ್ಲಿ 45 ವರ್ಷ ಮೇಲ್ಪಟ್ಟ ಫಲಾನುಭವಿಗಳು, ಎರಡನೇ ಡೋಸ್ ಪಡೆಯುವವರು, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 18 – 44 ರೊಳಗಿನ ದುರ್ಬಲ ವರ್ಗದ ಫಲಾನುಭವಿಗಳಿಗೆ ಮೊದಲ ಆದ್ಯತೆಯಲ್ಲಿ ನೀಡುವಂತೆಯೂ ಅವರು ಸೂಚಿಸಿದ್ದಾರೆ. ಈ ಅಭಿಯಾನದ ಯಶಸ್ಸಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಗಳನ್ನು ಬಳಸಿಕೊಳ್ಳಲು ಅವರು ತಿಳಿಸಿದ್ದಾರೆ.
ರಾಜ್ಯಾದ್ಯಂತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ಜಿಲ್ಲಾ ಮತ್ತು ತಾಲೂಕು ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ 5 ಸಾವಿರಕ್ಕೂ ಅಧಿಕ ಲಸಿಕಾ ಕೇಂದ್ರಗಳಲ್ಲಿ ಲಸಿಕಾ ಮೇಳ ನಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.