ನವದೆಹಲಿ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಇಂದು ಬೆಳಿಗ್ಗೆ ಭಾರೀ ಹಿಮದ ನಡುವೆ ಲಡಾಖ್ನಲ್ಲಿ 18,000 ಅಡಿಗಳಷ್ಟು ಎತ್ತರದಲ್ಲಿ ಯೋಗವನ್ನು ಪ್ರದರ್ಶಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ.
ಗಡಿ ಗಸ್ತು ಸಂಘಟನೆಯ ‘ಹಿಮವೀರರು’ ಕೂಡ ಲಡಾಖ್ನ ಪಾಂಗೊಂಗ್ ತ್ಸೋ ಸರೋವರದ ದಡದಲ್ಲಿ ಯೋಗಾಭ್ಯಾಸ ಮಾಡಿದರು.
ಈ ವರ್ಷದ ಥೀಮ್ ‘ಯೋಗ ಫಾರ್ ವೆಲ್ನೆಸ್ (ಯೋಗಕ್ಷೇಮಕ್ಕಾಗಿ ಯೋಗ)’ ಎಂಬುದಾಗಿದೆ. ದೇಹ ಮತ್ತು ಮನಸ್ಸು ಯೋಗಕ್ಷೇಮಕ್ಕಾಗಿ ಯೋಗಾಭ್ಯಾಸವನ್ನು ಕೇಂದ್ರೀಕರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪ್ರಾರಂಭವಾದ ನಂತರ ಜಾಗತಿಕವಾಗಿ 190 ಕ್ಕೂ ಹೆಚ್ಚು ದೇಶಗಳಲ್ಲಿ ಯೋಗ ದಿನವನ್ನು ಆಚರಿಸಲಾಗುತ್ತಿದೆ ಮತ್ತು ಇದನ್ನು 2015 ರಿಂದ ಜೂನ್ 21 ರಂದು ಆಚರಿಸಲಾಗುತ್ತಿದೆ. ಸೆಪ್ಟೆಂಬರ್ 2014 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಪ್ರಧಾನಿ ಮೋದಿ ಅವರು ಮಾಡಿದ ಭಾಷಣದಲ್ಲಿ ಯೋಗ ದಿನಾಚರಣೆಯ ಬಗ್ಗೆ ಪ್ರಸ್ತಾಪ ಮಾಡಿದ್ದರು.
#Himveers of #ITBP practicing #Yoga at the banks of Pangong Tso, Ladakh on #InternationalDayOfYoga.#InternationalYogaDay #YogaForWellness #YogaForHealth #अंतर्राष्ट्रीययोगदिवस @nwftr_itbp pic.twitter.com/gMdJvEH1IW
— ITBP (@ITBP_official) June 21, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.